ಕೋಲ್ಕತ್ತಾ: ವೈದ್ಯೆ ಮೇಲಿನ ಅತ್ಯಾಚಾರ, ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಮಮತಾ ಬ್ಯಾನರ್ಜಿ ಸರ್ಕಾರದ ವಿರುದ್ದ ಹರಿಹಾಯ್ದಿರುವ ಪಶ್ಚಿಮ ಬಂಗಾಳದ ರಾಜ್ಯಪಾಲ ಸಿ.ವಿ.ಆನಂದ್ ಬೋಸ್ ಈ ಪ್ರಕರಣದಲ್ಲಿ ಕಾನೂನು ಪಾಲಕರೇ ಸಂಚುಕೋರರಾಗಿದ್ದಾರೆ. ಪೊಲೀಸರು ರಾಜಕೀಯ ದಾಳಕ್ಕೆ ಕುಣಿಯುತ್ತಿದ್ದಾರೆ. ಕೊಲೆ ಪ್ರಕರಣದಲ್ಲಿ ಸರ್ಕಾರ ಹೊಣೆ ಹೊರಬೇಕು. ವೈದ್ಯರಿಗೆ ಕೆಲಸದ ಸ್ಥಳದಲ್ಲಿ ಭದ್ರತೆ ನೀಡಲಾಗದಿದ್ದರೆ ಹೇಗೆ? ಎಂದು ಮಮತಾ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಕೋಲ್ಕತ್ತಾದ ಆರ್.ಜಿ.ಕರ್ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಭೇಟಿ ನೀಡಿದ ಅವರು ಭದ್ರತೆ, ನ್ಯಾಯ ಒದಗಿಸಬೇಕಾದ ಪೊಲೀಸರು ಪ್ರಕರಣದಲ್ಲಿ ವೈಫಲ್ಯ ಅನುಭವಿಸಿದ್ದಾರೆ.
ಆಸ್ಪತ್ರೆ ಮೇಲೆ ದಾಳಿ ಮಾಡಿರುವುದನ್ನು ಖಂಡಿಸಿದ ರಾಜ್ಯಪಾಲರು ಕೆಲ ವಿಧ್ವಂಸಕ ವ್ಯಕ್ತಿಗಳು ಕಾಲೇಜಿನಲ್ಲಿ ದಾಂಧಲೆ ನಡೆಸಿ ದಾಖಲೆಗಳನ್ನು ಹಾಳು ಮಾಡಿದ್ದಾರೆ. ಇದು ತನಿಖೆಗೆ ಅಡ್ಡಿಯಾಗಲಿದೆ.ಇಂತಹ ಕೊಳೆತ ವ್ಯವಸ್ಥೆಯನ್ನು ಸರಿ ಮಾಡಬೇಕಿದೆ. ಪ್ರಕರಣದ ಹೊಣೆಯನ್ನು ಸರ್ಕಾರವೇ ಹೊರಬೇಕು. ಇದು ಅತ್ಯಂತ ನಾಚಿಕೆಗೇಡಿನ ಘಟನೆ ಎಂದಿದ್ದಾರೆ.