ಸುದ್ದಿ

ಭೀಕರ ರಸ್ತೆ ಅಪಘಾತ; ಜಾತ್ರೆಗೆ ಹೊರಟಿದ್ದ ಒಂದೇ ಕುಟುಂಬದ ನಾಲ್ವರು ದಾರುಣ ಸಾವು

Share It

ಗದಗ: ಸಾರಿಗೆ ಬಸ್‌ವೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿರೋ ದಾರುಣ ಘಟನೆ ನರಗುಂದ ತಾಲೂಕಿನ ಕೊಣ್ಣೂರ ಗ್ರಾಮದ ಬಳಿ ನಡೆದಿದೆ.
ಶ್ರಾವಣ ಮಾಸದ ಹಿನ್ನೆಲೆಯಲ್ಲಿ ದೇವಸ್ಥಾನಕ್ಕೆ ಹೋಗುತ್ತಿದ್ದವರು ಸಾವಿನ ಮನೆ ಸೇರಿದ್ದಾರೆ.

ಹಾವೇರಿ ಮೂಲದ ರುದ್ರಪ್ಪ ಅಂಗಡಿ (55), ಪತ್ನಿ ರಾಜೇಶ್ವರಿ (45), ಮಗಳು ಐಶ್ವರ್ಯ (16), ಮಗ ವಿಜಯ (12) ಮೃತರಾಗಿದ್ದು ಒಂದೇ ಕುಟುಂಬದ ನಾಲ್ವರು ಕಲ್ಲಾಪೂರ ಬಸವೇಶ್ವರ ದೇವಸ್ಥಾನ ಜಾತ್ರೆಗೆ ಹೊರಟ್ಟಿದ್ದರು. ಆಗ ಇಳಕಲ್ ನಿಂದ ಹುಬ್ಬಳ್ಳಿಗೆ ಹೊರಟ್ಟಿದ್ದ ಸಾರಿಗೆ ಬಸ್ ಡಿಕ್ಕಿ ಹೊಡೆದಿದೆ.

ಸಾರಿಗೆ ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಕಾರು ನಜ್ಜುಗುಜ್ಜು ಆಗಿದೆ. ಪರಿಣಾಮ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ನರಗುಂದ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


Share It

You cannot copy content of this page