ಶಿವಮೊಗ್ಗ: ಸರ್ಕಾರಿ ನೌಕರರು ಅಕ್ರಮವಾಗಿ ಪಡೆದಿರುವ ಬಿಪಿಎಲ್ ಕಾಡ್೯ಗಳನ್ನು ಗುರುತಿಸಿದ ಆಹಾರ, ನಾಗರಿಕ ಸರಬರಾಜು ಇಲಾಖೆ ಅವುಗಳನ್ನು ಎಪಿಎಲ್ ಕಾರ್ಡ್‌ಗೆ ಬದಲಾಯಿಸಿ, ಒಟ್ಟಾರೆ 72 ಸರ್ಕಾರಿ ನೌಕರರಿಗೆ ₹4,12,890 ದಂಡ ವಿಧಿಸಿದೆ.
ಆಹಾರ, ನಾಗರಿಕ ಸರಬರಾಜು ಇಲಾಖೆ ರಾಜ್ಯಾದ್ಯಂತ ಅಕ್ರಮ ಬಿಪಿಎಲ್ ಕಾರ್ಡ್‌ಗಳನ್ನು ಎಪಿಎಲ್ ಆಗಿ ಬದಲಿಸುವ ಕಾರ್ಯಕ್ಕೆ ಚಾಲನೆ ನೀಡಿತ್ತು. ಆದರ ಭಾಗವಾಗಿ ಜಿಲ್ಲಾ ಆಹಾರ ಇಲಾಖೆ ಶಿವಮೊಗ್ಗ ಜಿಲ್ಲೆಯಲ್ಲೂ ಅಕ್ರಮವಾಗಿ ಬಿಪಿಎಲ್ ಕಾರ್ಡ್ ಹೊಂದಿರುವ ಸರ್ಕಾರಿ ನೌಕರರು, ತೆರಿಗೆ ಪಾವತಿದಾರರ ಸಾವಿರಾರು ಕಾರ್ಡ್‌ಗಳನ್ನು ಪತ್ತೆ ಹಚ್ಚಿ ಎಪಿಎಲ್‌ಗೆ ಬದಲಿಸಿದೆ.
ಜಿಲ್ಲೆಯಲ್ಲಿ ಒಟ್ಟು 4.9 ಲಕ್ಷ ಪಡಿತರ ಚೀಟಿಗಳಿದ್ದು, ಇವುಗಳಲ್ಲಿ ಎಪಿಎಲ್ 1.2 ಲಕ್ಷ, ಬಿಪಿಎಲ್ 3.52 ಲಕ್ಷ, ಲಕ್ಷ, ಅಂತ್ಯೋದಯ 36 ಸಾವಿರ ಕಾರ್ಡ್‌ಗಳಿವೆ. ಕಳೆದ ಏ.1ರಿಂದ ಅ.31ರವರೆಗೆ 53,342 ಕಾರ್ಡ್‌ಗಳನ್ನು ಪರಿಶೀಲನೆಗೆ ಒಳಪಡಿಸಲಾಗಿದೆ.