ನವದೆಹಲಿ: ಏಳೂವರೆ ವರ್ಷದ ಬುದ್ದಿಮಾಂದ್ಯ ಬಾಲಕಿಯನ್ನು ಅಪಹರಿಸಿ, ಅತ್ಯಾಚಾರ ಮಾಡಿ ಹತ್ಯೆ ಮಾಡಿದ್ದ ವ್ಯಕ್ತಿಗೆ ಸುಪ್ರೀಂಕೋರ್ಟ್ ಶುಕ್ರವಾರ ಮರಣ ದಂಡನೆ ಶಿಕ್ಷೆಯನ್ನು ವಿಧಿಸಿ ಮಹತ್ವದ ಆದೇಶ ನೀಡಿದೆ.
ಈ ಅಪರಾಧ ಬರ್ಬರ ಹಾಗೂ ಅಮಾನವೀಯವಾಗಿದೆ ಎಂದು ಹೇಳಿದ ನ್ಯಾಯಾಲಯ ರಾಜಸ್ಥಾನ ಹೈಕೋರ್ಟ್ ಆದೇಶದ ವಿರುದ್ಧ ಸಲ್ಲಿಸಲಾದ ಮೇಲ್ಮನವಿಯನ್ನು ವಜಾಗೊಳಿಸಿದೆ.
ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎ. ಎಂ. ಖಾನ್ವಿಲ್ಕರ್, ದಿನೇಶ್ ಮಹೇಶ್ವರಿ ಮತ್ತು ಸಿ. ಟಿ. ರವಿಕುಮಾರ್ ಅವರನ್ನೊಳಗೊಂಡ ತ್ರಿಸದಸ್ಯ ನ್ಯಾಯಪೀಠ ಆರೋಪಿ ಮನೋಜ್ ಪ್ರತಾಪ್ ಸಿಂಗ್ ಗೆ ಮರಣ ದಂಡನೆ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ಬಾಲಕಿಗೆ ಚಾಕಲೇಟ್ ಆಸೆ ತೋರಿಸಿ ಕದ್ದ ಮೋಟಾರ್ ಸೈಕಲ್ ನಲ್ಲಿ ಮುಗ್ಧ ಸಂತ್ರಸ್ತೆಯನ್ನು ಅಪಹರಣ ಮಾಡಿ ಬರ್ಬರ ಹಾಗೂ ಅಮಾನವೀಯವಾಗಿ ಅತ್ಯಾಚಾರವೆಸಗಿ ಬಾಲಕಿ ತಲೆಗೆ ಹೊಡೆದು ಗಂಭೀರವಾಗಿ ಗಾಯ ಮಾಡಿರುವ ಅಂಶವನ್ನು ಪರಿಗಣಿಸಿರುವ ನ್ಯಾಯಾಲಯ ಅಪಾರಾಧಿಗೆ ಮರಣ ದಂದನೆ ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದೆ.