ಬೆಂಗಳೂರು: ಡಿ.ದೇವರಾಜ ಅರಸು ಟ್ರಕ್ ಟರ್ಮಿನಲ್‌ನಲ್ಲಿ (ಡಿಡಿಯುಟಿಟಿಎಲ್) ನಡೆದಿದೆ ಎನ್ನಲಾದ ₹47.50 ಕೋಟಿ ಅಕ್ರಮ ಆರೋಪದ ಪ್ರಕರಣದಲ್ಲಿ ನಿಗಮದ ಮಾಜಿ ಅಧ್ಯಕ್ಷರೂ ಆದ, ಬಿಜೆಪಿ ಮುಖಂಡ ಡಿ.ಎಸ್.ವೀರಯ್ಯ ವಿರುದ್ಧದ ತನಿಖೆ ಮತ್ತು ದೋಷಾರೋಪ ಪಟ್ಟಿಗೆ ಹೈಕೋರ್ಟ್ ತಡೆ ನೀಡಿದೆ.
ಡಿ.ಎಸ್. ವೀರಯ್ಯ ಸಲ್ಲಿಸಿದ್ದ ಅರ್ಜಿಯನ್ನು, ‘ಶಾಸಕರು ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ ವಿಶೇಷ ನ್ಯಾಯಪೀಠದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು ಮಂಗಳವಾರ ವಿಚಾರಣೆ ನಡೆಸಿದರು.
ವೀರಯ್ಯ ಅವರ ವಿರುದ್ಧದ ಹೆಚ್ಚುವರಿ ತನಿಖೆ ಮತ್ತು ಈಗಾಗಲೇ ಸಲ್ಲಿಸಲಾಗಿರುವ ದೋಷಾರೋಪ ಪಟ್ಟಿಗೆ ತಡೆ ವಿಧಿಸಲಾಗುತ್ತಿದೆ’ ಎಂದು ಆದೇಶಿಸಿದ ನ್ಯಾಯಪೀಠ, ವಿಚಾರಣೆಯನ್ನು ಇದೇ 19ಕ್ಕೆ ಮುಂದೂಡಿತು.ಈ ಪ್ರಕರಣ ಸಂಬಂಧ ಅರ್ಜಿದಾರರ ವಿರುದ್ದ ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ವೀರಯ್ಯ ಜಾಮೀನು ಪಡೆದುಕೊಂಡಿದ್ದಾರೆ.