ಬೆಂಗಳೂರು: ರಾಜ್ಯದಲ್ಲಿ ಸುಮಾರು 15 ಲಕ್ಷ ವಿಕಲಚೇತರಿದ್ದು ಇವರ ಸಬಲೀಕರಣಕ್ಕಾಗಿ ಸರ್ಕಾರ ಬದ್ಧವಾಗಿದೆ.ವಿಕಲಚೇತನರು ಸಮಾಜಕ್ಕೆ ಹೊರೆಯಲ್ಲ,ಅವರು ಸಮಾಜದ ಆಸ್ತಿ. ಎಲ್ಲಾ ಕ್ಷೇತ್ರಗಳಲ್ಲೂ ಸಾಧನೆ ಮಾಡುತ್ತಿರುವ ವಿಕಲಚೇತನರ ಸಬಲೀಕರಣಕ್ಕಾಗಿ ಸರ್ಕಾರ ಬದ್ಧವಾಗಿದೆ ಎಂದು ಮಂಗಳವಾರ ಸಿಎಂ ಸಿದ್ದರಾಮಯ್ಯ ಹೇಳಿದರು.
ಬೆಂಗಳೂರಿನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಂಗವಿಕಲರು ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ವತಿಯಿಂದ ನೆಡೆದ ಅಂತರಾಷ್ಟ್ರೀಯ ವಿಕಲಚೇತನರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,ರಾಜ್ಯದಲ್ಲಿ ಸುಮಾರು 15 ಲಕ್ಷ ವಿಕಲಚೇತನರಿದ್ದಾರೆ. ಅವರ ಶ್ರೇಯೋಭಿವೃದ್ಧಿಗಾಗಿ ಪ್ರಸಕ್ತ ಸಾಲಿನ ಪೂರಕ ಅಂದಾಜಿನಲ್ಲಿ 44 ಕೋಟಿಗಳನ್ನು ಮಂಜೂರು ಮಾಡಲಾಗುವುದು ಎಂದರು.