ಕಲಬುರಗಿ: 5ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಖಾಸಗಿ ಶಾಲೆಯ ಮುಖ್ಯ ಶಿಕ್ಷಕನ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಕಲಬುರಗಿ ಜಿಲ್ಲೆಯ ಯಡ್ರಾಮಿ ಪಟ್ಟಣದಲ್ಲಿ ವಿವಿಧ ಸಂಘಟನೆಗಳು
ಮಂಗಳವಾರ ಪ್ರತಿಭಟನೆ ನಡೆಸಿದ್ದಾರೆ.
ಯಡ್ರಾಮಿ ಪೊಲೀಸರು ಆರೋಪಿ ಖಾಜಾಸಾಬ್ ನನ್ನು ಬಂಧಿಸಿ ಮಂಗಳವಾರ ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, 15 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಸಂತ್ರಸ್ತೆ ಕಲಬುರಗಿ ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆಕೆಯ ಸ್ಥಿತಿ ಸ್ಥಿರವಾಗಿದೆ ಎಂದು ಮೂಲಗಳು ತಿಳಿಸಿವೆ. ವಿವಿಧ ಸ್ಥಳೀಯ ಸಂಘಟನೆಗಳು ನೀಡಿದ ಬಂದ್ ಕರೆಗೆ ಬೆಂಬಲ ಸೂಚಿಸಿ ಪಟ್ಟಣದ ಎಲ್ಲಾ ಅಂಗಡಿ-ಮುಂಗಟ್ಟುಗಳು, ವಾಣಿಜ್ಯ ಸಂಸ್ಥೆಗಳು, ಶಾಲಾ-ಕಾಲೇಜುಗಳು ಮುಚ್ಚಿದ್ದವು. ಶಾಲೆಗೆ ನೀಡಿರುವ ಅನುಮತಿಯನ್ನು (ಸರ್ಕಾರಿ ಮಾನ್ಯತೆ) ರದ್ದುಪಡಿಸಿ ಸಂತ್ರಸ್ತರಿಗೆ ಪರಿಹಾರ ನೀಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.