ಸುದ್ದಿ

ಧಾರವಾಡ ಯೋಗೇಶ್ ಗೌಡ ಕೊಲೆ ಕೇಸ್: ಮಾಫಿ ಸಾಕ್ಷಿ ಪರಿಗಣಿಸಿದ್ದ ಆದೇಶ ರದ್ದುಪಡಿಸಿದ ಹೈಕೋರ್ಟ್

Share It

ಬೆಂಗಳೂರು: ಧಾರವಾಡ ಬಿಜೆಪಿ ಮುಖಂಡ, ಜಿಪಂ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಮೊದಲ ಆರೋಪಿ ಬಸವರಾಜ ಶಿವಪ್ಪ ಮುತ್ತಗಿಯನ್ನು ಮಾಫಿ ಸಾಕ್ಷಿಯಾಗಿ ಪರಿಗಣಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್‌ ರದ್ದುಗೊಳಿಸಿದೆ.

ವಿಶೇಷ ನ್ಯಾಯಾಲಯದ ಆದೇಶ ರದ್ದು ಕೋರಿ ಧಾರವಾಡ ಕ್ಷೇತ್ರದ ಕಾಂಗ್ರೆಸ್‌ ಶಾಸಕ ವಿನಯ ಕುಲಕರ್ಣಿ ಸೇರಿ ಪ್ರಕರಣದ ಒಟ್ಟು 17 ಆರೋಪಿಗಳು ಸಲ್ಲಿಸಿದ್ದ ಪ್ರತ್ಯೇಕ ಕ್ರಿಮಿನಲ್ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠ ಈ ಆದೇಶ ಮಾಡಿದೆ.

ಮಾಫಿ ಸಾಕ್ಷಿಯನ್ನಾಗಿಸಿ, ಸಾಕ್ಷಿ ವಿಚಾರಣೆ ನಡೆಸಲು ಮೊದಲಿಗೆ ಪಾಟಿ ಸವಾಲು ನಡೆಸಬೇಕು. ಆದರೆ, ಈ ಪ್ರಕರಣದಲ್ಲಿ ಆರೋಪಿಯನ್ನು ಮಾಫಿ ಸಾಕ್ಷಿಯನ್ನಾಗಿಸುವುದಕ್ಕೂ ಮೊದಲೇ ಮ್ಯಾಜಿಸ್ಟ್ರೇಟ್ ಮುಂದೆ ಮಾಫಿ ಸಾಕ್ಷಿ ಹೇಳಿಕೆ ದಾಖಲಿಸಿಕೊಳ್ಳಲಾಗಿದೆ. ಇದು ಕಾನೂನುಬಾಹಿರ ಕ್ರಮ ಎಂದು ಕೋರ್ಟ್ ಸ್ಪಷ್ಟಪಡಿಸಿದೆ.


Share It

You cannot copy content of this page