ಬೆಂಗಳೂರು: ಮುಡಾ ಹಗರಣ ಕೇಸಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದರು.
ಬುಧವಾರ ಸುದ್ದಿಗಾರರ ಜತೆ ಮಾತನಾಡಿದ ಅವರು ಮುಡಾ ಹಗರಣದಲ್ಲಿ ಏನೆಲ್ಲಾ ನಡೆದಿದೆ ಎಂಬುದು ಹಾದಿ ಬೀದಿಯಲ್ಲಿ ಚರ್ಚೆ ನಡೆಯುತ್ತಿದೆ. ರಾಜ್ಯಪಾಲರಿಗೆ ದೂರು ನೀಡಿದವರೇ ಇ.ಡಿ. ಗೂ ದೂರು ಕೊಟ್ಟಿದ್ದಾರೆ. ಇದರಲ್ಲಿ ಕೇಂದ್ರವನ್ನು ದೂರಿದರೆ ಏನು ಉಪಯೋಗ? ಸಿದ್ದರಾಮಯ್ಯ ನಮ್ಮ ಬಗ್ಗೆ ಮಾತನಾಡಲು ನೈತಿಕತೆ ಇಲ್ಲ. ಪರಿಹಾರ ಎಂದು 14 ನಿವೇಶನ ಪಡೆದಿರುವುದೇ ಕಾನೂನು ಬಾಹಿರ. ಸಿದ್ದರಾ ಮಯ್ಯ ಈ ಪ್ರಕರಣದಲ್ಲಿ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಕಾನೂನು ಎಲ್ಲರಿಗೂ ಒಂದೇ. ತಪ್ಪು ಮಾಡಿದರೆ ಶಿಕ್ಷೆ ಅನುಭವಿಸಬೇಕು ಎಂದರು
ಸಿದ್ದರಾಮಯ್ಯ ಸರ್ಕಾರದ ಸಚಿವರು ಇ.ಡಿ ವಿರುದ್ಧ ಕಿಡಿಕಾರುತ್ತಿದ್ದಾರೆ. ಹತಾಶೆಯಿಂದ ನಿಂದಿಸುತ್ತಿದ್ದಾರೆ. ಸರ್ಕಾರ ಒಂದು ರೀತಿಯಲ್ಲಿ ಅಲಿಬಾಬಾ ಮತ್ತು 40 ಕಳ್ಳರ ಗುಂಪಿನಂತಿದೆ. ಅಧಿಕಾರಕ್ಕೆ ಬಂದಾಗಿನಿಂದ 17 ರಿಂದ 18 ಎಸ್‌ಐಟಿಗಳನ್ನು ರಚನೆ ಮಾಡಿಕೊಂಡು ಹಗೆ ಸಾಧಿಸುತ್ತಿದ್ದಾರೆ. ಸಚಿವ ಕೃಷ್ಣಬೈರೇಗೌಡ ಇ.ಡಿ.ಯನ್ನು ಸೀಳು ನಾಯಿ ಎಂದು ನಿಂದಿಸಿದ್ದಾರೆ. ಅವರಿಗೆ ಹ್ಯಾಟ್ಸ್ ಆಫ್ ಮಾಡೋಣ ಎಂದು ವ್ಯಂಗ್ಯ ಮಾಡಿದರು.