ಸುದ್ದಿ

ಹಿರಿಯ ಪತ್ರಕರ್ತ ಡಿ.ಉಮಾಪತಿ ಅವರಿಗೆ ವಡ್ಡರ್ಸೆ ರಘುರಾಮಶೆಟ್ಟಿ ಪತ್ರಿಕೋದ್ಯಮ ಪ್ರಶಸ್ತಿ

Share It

ಬೆಂಗಳೂರು: ಹಿರಿಯ ಪತ್ರಕರ್ತ, ಬರಹಗಾರರಾದ ಡಿ.ಉಮಾಪತಿ ಅವರು ರಾಜ್ಯ ಸರ್ಕಾರದ ವಡ್ಡರ್ಸೆ ರಘುರಾಮಶೆಟ್ಟಿ ಸಾಮಾಜಿಕ ನ್ಯಾಯ ಪತ್ರಿಕೋದ್ಯಮ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ವಾರ್ತಾ ಮತ್ತು ಸಾರ್ವಜನಿಕ ಇಲಾಖೆಯು ಪ್ರಸಕ್ತ ವರ್ಷದಿಂದ ಆರಂಭಿಸಿರುವ ವಡ್ಡರ್ಸೆ ರಘುರಾಮಶೆಟ್ಟಿ ಸಾಮಾಜಿಕ ನ್ಯಾಯ ಪತ್ರಿಕೋದ್ಯಮ ಪ್ರಶಸ್ತಿಗೆ ಡಿ.ಉಮಾಪತಿ ಅವರನ್ನು ರಾಜ್ಯ ಸರ್ಕಾರ ಆಯ್ಕೆ ಮಾಡಿದೆ ಎಂದು ಇಲಾಖೆಯ ಆಯುಕ್ತರಾದ ಹೇಮಂತ್ ಎಂ.ನಿಂಬಾಳ್ಕರ್ ತಿಳಿಸಿದ್ದಾರೆ.

ವಡ್ಡರ್ಸೆ ರಘುರಾಮಶೆಟ್ಟಿ ಸಾಮಾಜಿಕ ನ್ಯಾಯ ಪತ್ರಿಕೋದ್ಯಮ ಪ್ರಶಸ್ತಿಯು 2 ಲಕ್ಷ ರೂ. ನಗದು,ಸ್ಮರಣಿಕೆ ಒಳಗೊಂಡಿದೆ.

ಚಿತ್ರದುರ್ಗ ಜಿಲ್ಲೆಯವರಾದ ಪತ್ರಕರ್ತ, ಬರಹಗಾರ ಡಿ.ಉಮಾಪತಿ ಅವರು ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪತ್ರಿಕೋದ್ಯಮ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಕನ್ನಡಪ್ರಭದಲ್ಲಿ ಪತ್ರಕರ್ತರಾಗಿ ಪತ್ರಿಕೋದ್ಯಮ ಆರಂಭಿಸಿದ ಇವರು ನಂತರ ವಿಜಯ ಕರ್ನಾಟಕ, ಪ್ರಜಾವಾಣಿ ಪತ್ರಿಕೆಗಳಲ್ಲಿ ದೆಹಲಿ ವರದಿಗಾರರಾಗಿ ಕೆಲಸ ನಿರ್ವಹಿಸಿದ್ದಾರೆ.

ಈಟಿವಿಯ ದೆಹಲಿ ಪ್ರತಿನಿಧಿಯಾಗಿಯೂ ಕೆಲಸ ಮಾಡಿರುವ ಡಿ.ಉಮಾಪತಿ ಅವರು ವಿಜಯ ಕರ್ನಾಟಕ, ಪ್ರಜಾವಾಣಿ, ಸಂಯುಕ್ತ ಕರ್ನಾಟಕ, ವಾರ್ತಾಭಾರತಿ,ಆಂದೋಲನ ಪತ್ರಿಕೆಗಳಿಗೆ ಅಂಕಣ ಬರಹಗಾರರಾಗಿಯೂ,ಪ್ರಸ್ತುತ ‘ ಮತ್ತು ಈದಿನ ವೆಬ್ ಜರ್ನಲ್, ನ್ಯಾಯಪಥ’ ಸಂದರ್ಶಕ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.


Share It

You cannot copy content of this page