ಬೆಂಗಳೂರು: ಭ್ರಷ್ಟಾಚಾರ ಎಸಗಿದ ಆರೋಪದ ಮೇಲೆ ಅಮಾನತುಗೊಂಡಿದ್ದ ಬೆಂಗಳೂರು ಗ್ರಾಮಾಂತರ ಜಿಲ್ಲೆ,ದೇವನಹಳ್ಳಿ ತಾಲ್ಲೂಕಿನ ಕುಂದಾಣ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಡಿ.ಎಂ.ಪದ್ಮನಾಭ,ಅಮಾನತು ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ತಮ್ಮ ವಿರುದ್ಧದ ಕ್ರಿಮಿನಲ್ ಮೊಕದ್ದಮೆ ಇತ್ಯಾರ್ಥವಾಗಬೇಕಿದ್ದು ಅಲ್ಲಿಯವರೆಗೂ ಅನತುಗೊಳಿಸದಿದ್ದಲ್ಲಿ ಅಧಿಕಾರಿಗಳ ಕರ್ತವ್ಯ ನಿರ್ವಹಣೆ ಬಗ್ಗೆ ಸಾರ್ವಜನಿಕರ ವಿಶ್ವಾಸಕ್ಕೆ ಚ್ಯುತಿ ಉಂಟಾಗುತ್ತದೆ ಎಂದು ನ್ಯಾಯಾಲಯ ಹೇಳಿದೆ.
ಕುಂದಾಣ ಗ್ರಾಮ ಪಂಚಾಯತಿ ಪಿಡಿಒ ಡಿ.ಎಂ.ಪದ್ಮನಾಭ,ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ಕೃಷ್ಣ ಎಸ್ ದೀಕ್ಷಿತ್ ಮತ್ತು ಸಿ.ಎಂ ಜೋಶಿ ಅವರಿದ್ದ ನ್ಯಾಯಪೀಠ ಅರ್ಜಿಯನ್ನು ವಜಾಗೊಳಿಸಿದೆ.
ಭ್ರಷ್ಟಾಚಾರ ತಡೆ ಕಾಯ್ದೆಯ ಸೆದಾಖಲಿಸಿದ ನಂತರಕ್ಷನ್ 7(ಎ) ಅಡಿಯಲ್ಲಿ ಪ್ರಕರಣ ದಾಖಲಿಸಿದ ನಂತರ ಸೆಪ್ಟೆಂಬರ್ 6,2024 ರಂದಿ ಪಿಡಿಒ ಅಮಾನತುಗೊಳಿಸಲಾಗಿತ್ತು.ಆದರೆ ಅಮಾನತಿಗೆ ಯಾವುದೇ ಕಾರಣಗಳನ್ನು ನೀಡದಿರುವುದನ್ನು ಪ್ರಶ್ನಿಸಿ ಪಿಡಿಒ ಹೈಕೋರ್ಟ್ ಮೊರೆ ಹೋಗಿದ್ದರು.