ಮುಂಬೈ: ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) 26ನೇ ಗವರ್ನರ್ ಆಗಿ ಸಂಜಯ್ ಮಲ್ಹೋತ್ರಾ (56) ಬುಧವಾರ ಅಧಿಕಾರ ಸ್ವೀಕರಿಸಿದ್ದಾರೆ.
ಹಿರಿಯ ಐಎಎಸ್ ಅಧಿಕಾರಿ ಸಂಜಯ್ ಮಲ್ಹೋತ್ರಾ ಮುಂದಿನ 3 ವರ್ಷಗಳ ಅವಧಿಗೆ ಆರ್‌ಬಿಐ ಅನ್ನು ಮುನ್ನಡೆಸಲಿದ್ದಾರೆ. ಅಧಿಕಾರ ಸ್ವೀಕರಿಸಿ ಮಾತನಾಡಿದ ಅವರು ಆರ್‌ಬಿಐ ಆರ್ಥಿಕ ಸುಧಾರಣಾ ಕ್ರಮಗಳನ್ನು ಜರುಗಿಸಲಿದೆ ಎಂದು ಹೇಳಿದರು.