ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಳರ್ ವಿರುದ್ಧ ವಿಧಾನ
ಪರಿಷತ್‌ನಲ್ಲಿ ಆಕ್ಷೇಪಾರ್ಹ ಪದ ಬಳಸಿದ ಆರೋಪದ ಮೇಲೆ ವಿಧಾನ ಪರಿಷತ್ ಬಿಜೆಪಿ ಸದಸ್ಯ ಸಿ.ಟಿ.ರವಿ ವಿರುದ್ಧ ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಇಂದು ಎಫ್‌ಐಆರ್ ದಾಖಲಾಗಿದ್ದು. ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಸಚಿವೆ ಲಕ್ಷ್ಮಿ ಹೆಬ್ಬಾಳ್ಳರ್ ನೀಡಿದ ದೂರಿನನ್ವಯ ಪೊಲೀಸರು ಸಿ.ಟಿ.ರವಿ ವಿರುದ್ಧ ಜಾಮೀನು ರಹಿತ ಪ್ರಕರಣದಲ್ಲಿ ದಾಖಲಾಗಿದ್ದ ಎಫ್‌ಐಆರ್ ದಾಖಲಿಸಿಕೊಂಡಿದ್ದ ಹಿರೇಬಾಗೇವಾಡಿ ಪೊಲೀಸರು ಸುವರ್ಣ ವಿಧಾನಸೌಧದ ಮೆಟ್ಟಿಲುಗಳ ಮೇಲೆ ಕುಳಿತು ಪ್ರತಿಭಟನೆ ಮಾಡುತ್ತಿದ್ದ ಬಿಜೆಪಿ ಪರಿಷತ್ ಸದಸ್ಯರಾದ ಸಿ.ಟಿ.ರವಿ ಅವರನ್ನು ಬಂಧಿಸಿದ ಪೊಲೀಸರು ನಂದಗಡ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿದ್ದಾರೆ ಎಂದು ತಿಳಿದು ಬಂದಿದೆ.