ಬೆಂಗಳೂರು: ಜಾತಿ ನಿಂದನೆ ಆರೋಪದಡಿ ಬನ್ನೇರುಘಟ್ಟ ರಸ್ತೆಯ ಬಿಳಿಕಹಳ್ಳಿಯಲ್ಲಿ ಇರುವ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ನಿರ್ದೇಶಕ ಸೇರಿದಂತೆ ಎಂಟು ಮಂದಿ ವಿರುದ್ಧ ಮೈಕೋ ಲೇಔಟ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಐಐಎಂಬಿ ಪ್ರಾಧ್ಯಾಪಕ ಗೋಪಾಲ್ ದಾಸ್ ಅವರು ನೀಡಿದ ದೂರು ಆಧರಿಸಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.
ನಿರ್ದೇಶಕ ರಿಶಿಕೇಶ್ ಟಿ. ಕೃಷ್ಣನ್ ಹಾಗೂ ದಿನೇಶ್ ಕುಮಾರ್, ಶೈನೇಶ್, ಶ್ರೀನಿವಾಸ್ ಪ್ರಖ, ಚೇತನ್ ಸುಬ್ರಹ್ಮಣ್ಯ, ಆಶೀಶ್ ಮಿಶ್ರಾ, ಶ್ರೀಲೀಲಾ, ರಾಹುಲ್ ಡೇ ಅವರ ವಿರುದ್ಧ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ದೌರ್ಜನ್ಯ ತಡೆ ಕಾಯ್ದೆ ಅಡಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.