ಭೋಪಾಲ್: ಆದಾಯ ಮೀರಿ ಆಸ್ತಿ ಗಳಿಸಿದ ಆರೋಪದ ಮೇಲೆ ಲೋಕಾಯುಕ್ತ ಪೊಲೀಸರು ಸಾರಿಗೆ ಇಲಾಖೆಯ ಮಾಜಿ ಕಾನ್ಸ್‌ಟೇಬಲ್ (Constable) ಮನೆ ಮೇಲೆ ದಾಳಿ ನಡೆಸಿದಾಗ 40 ಕೆಜಿ ಬೆಳ್ಳಿ, 2.85 ಕೋಟಿ ರೂ. ನಗದು ಪತ್ತೆಯಾಗಿರುವ ಘಟನೆ ಮದ್ಯಪ್ರದೇಶದ ಭೋಪಾಲ್‌ನಲ್ಲಿ ನಡೆದಿದೆ.
ಆದಾಯಕ್ಕೂ ಮೀರಿ ಅಧಿಕ ಆಸ್ತಿ ಗಳಿಸಿದದ ಬಗ್ಗೆ ದೂರು ದಾಖಲಾದ ಹಿನ್ನೆಲೆ ಸಾರಿಗೆ ಇಲಾಖೆಯ ಮಾಜಿ ಕಾನ್ಸ್ ಟೇಬಲ್ ಮನೆ ಮೇಲೆ ದಾಳಿ ಮಾಡಿ ಪರಿಶೀಲಿಸಲಾಗುತ್ತಿದೆ ಎಂದು ಲೋಕಾಯುಕ್ತ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದಾಳಿ ವೇಳೆ 50 ಲಕ್ಷ ರೂ ಮೌಲ್ಯದ ಆಭರಣ, 40 ಕೆಜಿ ಬೆಳ್ಳಿ, 2.85 ಕೋಟಿ ರೂ. ನಗದು ಪತ್ತೆಯಾಗಿದ್ದು, ಆದಾಯಕ್ಕೂ ಆಸ್ತಿಗೂ ತಾಳೆ ಆಗದ ಕಾರಣ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಸಾರಿಗೆ ಇಲಾಖೆಯಲ್ಲಿ ಕಾನ್ಸ್‌ಟೇಬಲ್ ಆಗಿ ಕಾರ್ಯನಿರ್ವಹಿಸುತ್ತಿದ್ದ ವ್ಯಕ್ತಿಯು ಕೆಲ ದಿನಗಳ ಹಿಂದಷ್ಟೇ ತಮ್ಮ ವೃತ್ತಿಗೆ ರಾಜೀನಾಮೆಯನ್ನು ನೀಡಿದ್ದರು. ಇದಲ್ಲದೆ ವ್ಯಕ್ತಿಯು ರಿಯಲ್ ಎಸ್ಟೇಟ್ ಬಿಸಿನೆಸ್‌ನಲ್ಲಿ ತೊಡಗಿಸಿಕೊಂಡಿದ್ದರು ಎಂದು ಹೇಳಲಾಗಿದ್ದು, ವ್ಯವಹಾರ ಮತ್ತು ಆದಾಯದ ಮೂಲವನ್ನು ಲೋಕಾಯುಕ್ತ ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ.