ಮಂಡ್ಯ: ನಾನು ಮುಖ್ಯಮಂತ್ರಿಯಾಗಿದ್ದಾಗ ಇಂಗ್ಲಿಷ್ ಮಾಧ್ಯಮದ ಒಂದು ಸಾವಿರ ಕರ್ನಾಟಕ ಪಬ್ಲಿಕ್ ಶಾಲೆಗಳಿಗೆ ಅನುಮತಿ ನೀಡಿದ್ದಕ್ಕಾಗಿ ಕ್ಷಮೆಯಾಚಿಸುವುದಾಗಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಮಂಡ್ಯದಲ್ಲಿ ನಡೆದ 87ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಎಚ್.ಡಿ.ಕುಮಾರಸ್ವಾಮಿ ಸಮ್ಮೇಳನದ ಅಧ್ಯಕ್ಷರ ಭಾಷಣವನ್ನು ಪ್ರಸ್ತಾವಿಸಿ ಮಾತನಾಡಿದರು.
ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ ಮಕ್ಕಳು ಖಾಸಗಿ ಶಾಲೆಯ ಮಕ್ಕಳೊಂದಿಗೆ ಸಮಾನವಾಗಿ ಸ್ಪರ್ಧೆ ಮಾಡಲಿ ಎನ್ನುವ ನಿಟ್ಟಿನಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಗಳಿಗೆ ಇಂಗ್ಲಿಷ್ ಮಾಧ್ಯಮಕ್ಕೆ ಅನುಮತಿ ನೀಡಿದ್ದೆ. ಎಂದು ತಿಳಿಸಿದರು.
ಸಮ್ಮೇಳನದ ಅಧ್ಯಕ್ಷರಾದ ಗೂ.ರು.ಚನ್ನಬಸಪ್ಪ ಅವರು ಅಧ್ಯಕ್ಷೀಯ ಭಾಷಣದಲ್ಲಿ ಶಿಕ್ಷಣ ಮಾಧ್ಯಮ ಕುರಿತಂತೆ ಕೇಂದ್ರೀಯ ಪಠ್ಯ ಕ್ರಮದ ಶಾಲೆಗಳ ಜೊತೆಯಲ್ಲಿಯೇ ರಾಜ್ಯ ಸರ್ಕಾರವೇ ಕರ್ನಾಟಕ ಪಬ್ಲಿಕ್ ಶಾಲೆ ತೆರೆದಿರುವುದು ಪೋಷಕರಲ್ಲಿ ಗೊಂದಲ ಉಂಟು ಮಾಡಿದೆ. ಕನ್ನಡವೇ ಶಿಕ್ಷಣ ಭಾಷೆಯಾಗಬೇಕು. ಇಂಗ್ಲೀಷ್ ಪಠ್ಯಕ್ರಮದ ಒಂದು ವಿಷಯವಾಗಬೇಕು ಎಂದು ಪ್ರತಿಪಾದಿಸಿದ್ದರು. ಈ ಹಿನ್ನೆಲೆಯಲ್ಲಿ ಎಚ್.ಡಿ.ಕುಮಾರಸ್ವಾಮಿ ಅವರು ಸಮ್ಮೇಳನದ ಸಮಾರೋಪ ಭಾಚಣದಲ್ಲಿ ಈ ಕುರಿತು ಕ್ಷಮೆಯಾಚಿಸಿದ್ದಾರೆ.