ಬೆಂಗಳೂರು: ಆರು ಜಿಲ್ಲಾ ನ್ಯಾಯಾಧೀಶರ ಶ್ರೇಣಿಯ ನ್ಯಾಯಾಂಗ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಹೈಕೋರ್ಟ್ ಆದೇಶಿಸಿದೆ. ಈ ಕುರಿತಂತೆ ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಕೆ.ಎಸ್ ಭರತ್ ಕುಮಾರ್ ಅಧಿಸೂಚನೆ ಹೊರಡಿಸಿದ್ದಾರೆ.
ಕರ್ನಾಟಕ ರಾಜ್ಯ ಸಾರಿಗೆ ಮೇಲ್ಮನವಿ ನ್ಯಾಯಮಂಡಳಿ ಮುಖ್ಯಸ್ಥರಾಗಿದ್ದ ನ್ಯಾ. ಎಸ್. ಮಹಾಲಕ್ಷ್ಮಿ ನೇರಳೆ ಅವರನ್ನು ರಾಜ್ಯ ಸರ್ಕಾರದ ಕಾನೂನು ಇಲಾಖೆ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.
ಕರ್ನಾಟಕ ಮೇಲ್ಮನವಿ ನ್ಯಾಯಮಂಡಳಿ ಸದಸ್ಯರಾಗಿದ್ದ ನ್ಯಾ. ನಂದಕುಮಾರ್ ಬಿ ಅವರನ್ನು ಕರ್ನಾಟಕ ರಾಜ್ಯ ಸಾರಿಗೆ ಮೇಲ್ಮನವಿ ನ್ಯಾಯಮಂಡಳಿ ಮುಖ್ಯಸ್ಥರಾಗಿ ವರ್ಗಾಯಿಸಲಾಗಿದೆ.
ಹಾಸನ ಜಿಲ್ಲಾ ಪ್ರಧಾನ ನ್ಯಾಯಾಧೀಶರಾಗಿದ್ದ ನ್ಯಾ. ಉಶಾ ರಾಣಿ ಅವರನ್ನು ಮೈಸೂರು ಜಿಲ್ಲಾ ಪ್ರಧಾನ ನ್ಯಾಯಾಧೀಶರ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.
ಕರ್ನಾಟಕ ಮಧ್ಯಸ್ಥಿಕೆ ಕೇಂದ್ರದ ನಿರ್ದೇಶಕರಾಗಿದ್ದ ನ್ಯಾ. ಎಚ್. ಆರ್. ರಾಧಾ ಅವರನ್ನು ಕರ್ನಾಟಕ ನ್ಯಾಯಾಂಗ ಅಕಾಡೆಮಿ ನಿರ್ದೇಶಕರ ಹುದ್ದೆಗೆ ವರ್ಗಾಯಿಸಲಾಗಿದೆ.
ಬೆಂಗಳೂರಿನ 53ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್ ನ್ಯಾಯಾಧೀಶರಾಗಿದ್ದ ಎಸ್. ಗೋಪಾಲಪ್ಪ ಅವರನ್ನು ಕರ್ನಾಟಕ ಮಧ್ಯಸ್ಥಿಕೆ ಕೇಂದ್ರದ ನಿರ್ದೇಶಕರ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.
ಕರ್ನಾಟಕ ಲೋಕಾಯುಕ್ತದಲ್ಲಿ ಹೆಚ್ಚುವರಿ ರಿಜಿಸ್ಟ್ರ್ರಾರ್ (ತನಿಖೆ) ಅಗಿದ್ದ ನ್ಯಾ. ಹೇಮಾವತಿ ಅವರನ್ನು ಹಾಸನ ಜಿಲ್ಲಾ ಪ್ರಧಾನ ನ್ಯಾಯಾಧೀಶರ ಹುದ್ದೆಗೆ ವರ್ಗಾವಣೆ ಮಾಡಿ ಹೈಕೋರ್ಟ್ ಆದೇಶಿಸಿದೆ.
ಜಿಲ್ಲಾ ನ್ಯಾಯಾಧೀಶರ ವರ್ಗಾವಣೆ: ಹೈಕೋರ್ಟ್ ಆದೇಶ
![](https://e-news.in/wp-content/uploads/2024/04/HCK.jpeg)