ಅಪಘಾತದಲ್ಲಿ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲ್ಲೂಕಿನ ಕುಪ್ಪನವಾಡಿ ಗ್ರಾಮದ ಯೋಧ ಧರ್ಮರಾಜ ಸುಭಾಷ ಖೋತ್ ಸಾವನ್ನಪ್ಪಿದ್ದಾರೆ.
ಬೆಳಗಾವಿ: ಈಶಾನ್ಯ ರಾಜ್ಯ ಮಣಿಪುರದ ಇಂಪಾಲಾ ಜಿಲ್ಲೆಯ ಬೊಂಬಾಲಾ ಪ್ರದೇಶದ ಇಂಪಾಲಾ ಕಣಿವೆಯಲ್ಲಿ ಮಂಗಳವಾರ ಸೇನಾ ವಾಹನ ಉರುಳಿ, ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲ್ಲೂಕಿನ ಕುಪ್ಪನವಾಡಿ ಗ್ರಾಮದ ಯೋಧ ಧರ್ಮರಾಜ ಸುಭಾಷ ಖೋತ್ (42) ಸಾವನ್ನಪ್ಪಿದ್ದಾರೆ.
ಆರು ಜನ ಯೋಧರು ಕರ್ತವ್ಯ ಮುಗಿಸಿಕೊಂಡು ಬರುತ್ತಿರುವಾಗ, ಕಣಿವೆ ಬಳಿ ಭೂಮಿ ಕುಸಿದು ವಾಹನ ಕಂದಕಕ್ಕೆ ಉರುಳಿತು. ಗಾಯಗೊಂಡ ಎಲ್ಲ ಯೋಧರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಆದರೆ ಬೆಳಗಾವಿ ಜಿಲ್ಲೆಯ ಯೋಧ ಧರ್ಮರಾಜ ಸುಭಾಷ್ ಖೋತ್ ಅವರು ಅಲ್ಲೇ ಕೊನೆಯುಸಿರೆಳೆದರು. ಮೃತ ಯೋಧನ ಪಾರ್ಥಿವ ಶರೀರವನ್ನು ಯೋಧನ ಹುಟ್ಟೂರಿಗೆ ತರಲಾಗುವುದು ಎಂದು ಮೂಲಗಳು ತಿಳಿಸಿವೆ.