ಶಿವರಾಜ್ ಕುಮಾರ್ ಅವರಿಗೆ ಶಸ್ತ್ರಚಿಕಿತ್ಸೆ ನೆರವೇರಿಸಿದ ಅಮೇರಿಕಾ ವೈದ್ಯ ಡಾ. ಮುರುಗೇಶ್ ಮನೋಹರನ್ ಅವರು ಮಾಹಿತಿ ಹಂಚಿಕೊಂಡಿದ್ದಾರೆ.
ಬೆಂಗಳೂರು: ನಟ ಶಿವರಾಜ್‌ಕುಮಾರ್ ಅವರ ಇತ್ತೀಚಿನ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಅವರ ಆರೋಗ್ಯ ಸ್ಥಿರವಾಗಿದ್ದು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಶಸ್ತ್ರಚಿಕಿತ್ಸೆ ನೆರವೇರಿಸಿದ ವೈದ್ಯ ಡಾ. ಮುರುಗೇಶ್ ಮನೋಹರನ್ ಅವರು ತಿಳಿಸಿದ್ದಾರೆ.
ಶಸ್ತ್ರಚಿಕಿತ್ಸೆಯ ವೇಳೆ ಮತ್ತು ಶಸ್ತ್ರಚಿಕಿತ್ಸೆ ನಂತರದ ಆರೈಕೆ ಸಮಯದಲ್ಲಿ ಡಾ. ಶಿವರಾಜ್‌ಕುಮಾರ್ ಅವರ ಆರೋಗ್ಯ ಸ್ಥಿತಿಯು ಸ್ಥಿರವಾಗಿತ್ತು ಎಂದು ಅವರು ವಿಡಿಯೋ ಸಂದೇಶದಲ್ಲಿ ತಿಳಿಸಿದ್ದಾರೆ.
ಶಸ್ತ್ರ ಚಿಕಿತ್ಸೆಯ ನಂತ ಶಿವಣ್ಣ ಅವರು ನಿಗಾಘಟಕದಲ್ಲಿದ್ದಾರೆ. ಪರಿಣತ ವೈದ್ಯರು ಹಾಗೂ ಆರೋಗ್ಯ ಸಿಬ್ಬಂದಿಗಳ ತಂಡದಿಂದ ಅತ್ಯುತ್ತಮ ಆರೈಕೆ ನಡೆಯುತ್ತಿದೆ ಎಂದು ವೈದ್ಯ ಡಾ. ಮುರುಗೇಶ್ ಮನೋಹರನ್ ತಿಳಿಸಿದ್ದಾರೆ.
ನಟ ಶಿವರಾಜ್‌ಕುಮಾರ್ ಅನಾರೋಗ್ಯ ಅವರ ಕುಟುಂಬ ಹಾಗೂ ಅಭಿಮಾನಿಗಳನ್ನು ಆತಂಕಕ್ಕೆ ಎಡೆ ಮಾಡಿಕೊಟ್ಟಿತ್ತು. ಖುದ್ದಾಗಿ ಶಿವಣ್ಣನೇ ಮುಂದು ಬಂದು ತಮ್ಮ ಆರೋಗ್ಯದ ಬಗ್ಗೆ ಮಾಹಿತಿಯನ್ನು ಹಂಚಿಕೊಂಡಿದ್ದರು. ಅಲ್ಲಿಂದ ಅವರ ಫ್ಯಾನ್ಸ್ ಕೂಡ ಆತಂಕಕ್ಕೆ ಒಳಗಾಗಿದ್ದರು. ಕಳೆದ ಕೆಲವು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ಶಿವಣ್ಣ ಹೆಚ್ಚಿನ ಚಿಕಿತ್ಸೆಗಾಗಿ ಅಮೆರಿಕಗೆ ತೆರಳಿದ್ದರು.