ಚೆನ್ನೈ: ರಸ್ತೆಯ ಬದಿಯ ವ್ಯಾಪಾರಿಯೊಬ್ಬ ಕ್ಯಾಂಪಸ್ ನೊಳಗೆ ನುಗ್ಗಿ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ, ಆಕೆಯ ಗೆಳೆಯನ ಮೇಲೂ ಹಲ್ಲೆ ನಡೆಸಿರುವ ಅಮಾನುಷ ಘಟನೆ ರಸ್ತೆ ಚೆನ್ನೈನ ಅಣ್ಣಾ ವಿಶ್ವವಿದ್ಯಾಲಯದಲ್ಲಿ ನಡೆದಿದೆ.
ಡಿಸೆಂಬರ್ 23 ರಂದು ಸಂಜೆ ಈ ಘಟನೆ ನಡೆದಿದ್ದು, ಸಂತ್ರಸ್ತರು ಡಿ.24 ರಂದು ಪೊಲೀಸರಿಗೆ ದೂರು ನೀಡಿದ್ದಾರೆ. ದೂರು ಆಧರಿಸಿ ಆರೋಪಿ ಜ್ಞಾನಶೇಖರನ್ (37) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯು ಈಗಾಗಗಲೇ ಆರೋಪಿ ಮೇಲೆ ಹಲವು ಪ್ರಕರಣಗಳ ಅಪರಾಧಿ’ಯಾಗಿದ್ದಾನೆ. ಈತನ ವಿರುದ್ಧ ಬಿಎನ್‌ಎಸ್ ಕಾಯ್ದೆಯ ವಿವಿಧ ಸೆಕ್ಷನ್‌ಗಳಡಿ ಅತ್ಯಾಚಾರ ಪ್ರಕರಣ ದಾಖಲಾಗಿದೆ.
ಆರೋಪಿ, ವಿಶ್ವವಿದ್ಯಾನಿಲಯದ ಬಳಿಯ ಕೊಟ್ಟೂರ್‌ಪುರಂನಲ್ಲಿ ರಸ್ತೆ ಬದಿ ಉಪಾಹಾರ ಗೃಹ ನಡೆಸುತ್ತಿದ್ದು ಕ್ಯಾಂಪಸ್‌ನಲ್ಲಿರುವ ಸಿಸಿಟಿವಿ ಕ್ಯಾಮೆರಾಗಳ ದೃಶ್ಯಗಳನ್ನು ಪರಿಶೀಲಿಸಿದ ನಂತರ ಆರೋಪಿಯನ್ನು ಬಂಧಿಸಲಾಗಿದೆ.
ಎರಡನೇ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿನಿ ಮತ್ತು ಆಕೆಯ ಗೆಳೆಯ ಸೋಮವಾರ ರಾತ್ರಿ ಊಟದ ನಂತರ ವಿಶ್ವವಿದ್ಯಾನಿಲಯದ ಕ್ಯಾಂಪಸ್‌ನಲ್ಲಿರುವ ಕಟ್ಟಡದ ಹಿಂದೆ ಮಾತನಾಡುತ್ತ ನಿಂತಿದ್ದರು. ಆಗ ಆರೋಪಿ ವಿದ್ಯಾರ್ಥಿಗೆ ಬೆದರಿಕೆ ಹಾಕಿ ಹಲ್ಲೆ ನಡೆಸಿ, ತಕ್ಷಣ ವಿದ್ಯಾರ್ಥಿನಿಯನ್ನು ಪಕ್ಕದ ಪೊದೆಗೆ ಎಳೆದೊಯ್ದು, ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ. ಎನ್ನಲಾಗಿದೆ. ಸಂತ್ರಸ್ತ ವಿದ್ಯಾರ್ಥಿನಿ ಮತ್ತು ಆಕೆಯ ಸ್ನೇಹಿತನನ್ನು ಆಪ್ತಸಮಾಲೋಚನೆ ನಡೆಸಲಾಗಿದೆ. ವಿಶ್ವವಿದ್ಯಾಲಯದ ಆಂತರಿಕ ದೂರುಗಳ ಸಮಿತಿಯ ಸಮನ್ವಯದಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.