ಸುದ್ದಿ

ಮೈಸೂರಿಗೆ ಸಿದ್ದರಾಮಯ್ಯ ಕೊಡುಗೆ ಅನನ್ಯ: ಅವರು ಮೈಸೂರಿನ ಸುಪುತ್ರ; ಪ್ರತಾಪ್ ಸಿಂಹ

Share It

ಜಯದೇವ ಆಸ್ಪತ್ರೆ, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಿಸಿದ್ದ ಸಿದ್ದರಾಮಯ್ಯ, ರಾಜಪಥ ಮಾಡಿಸಿದ್ದು ಸಿದ್ದರಾಮಯ್ಯ.40 ವರ್ಷದಿಂದ ವಿಧಾನಸಭೆಗೆ ಹೋಗಿದ್ದಾರೆ. ರಸ್ತೆಗೆ ಅವರ ಹೆಸರು ಇಡುವುದರಲ್ಲಿ ತಪ್ಪೆನಿದೆ.

ಮೈಸೂರು: ಮೈಸೂರಿನ ಕೆಆರ್ ಎಸ್ ರಸ್ತೆಗೆ ‘ಸಿದ್ದರಾಮಯ್ಯ ಆರೋಗ್ಯ ರಸ್ತೆ’ ಎಂದು ಪಾಲಿಕೆ ನಾಮಕರಣ ಮಾಡಲು ಮುಂದಾದ ವಿಚಾರಕ್ಕೆ ವಿರೋಧ ವ್ಯಕ್ತವಾದ ಬಗ್ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಿದ್ದರಾಮಯ್ಯ ಅವರು 40 ವರ್ಷ ವಿಧಾನಸಭೆಗೆ ಆಯ್ಕೆಯಾಗಿದ್ದಾರೆ ಅಂತವರವ ಹೆಸರನ್ನು ರಸ್ತೆಗೆ ಇಡುವುದರಲ್ಲಿ ತಪ್ಪೇನಿದೆ ಎಂದು ಪ್ರಾ್ನಿಸುವ ಮೂಲಕ ಸಿಎಂ ಪರ ಬ್ಯಾಟಿಂಗ್ ಮಾಡಿದ್ದಾರೆ.

ಸಿದ್ದರಾಮಯ್ಯ ಮೈಸೂರಿನ ಸುಪುತ್ರ. ಸೈದ್ಧಾಂತಿಕವಾಗಿ ನಾನು ಅವರನ್ನು ವಿರೋಧಿಸುತ್ತೇನೆ. ಆದರೆ ಈ ವಿಚಾರದಲ್ಲಿ ವಿರೋಧ ಮಾಡಲ್ಲ. ಮೈಸೂರಿಗೆ ಸಿದ್ದರಾಮಯ್ಯನವರ ಕೊಡುಗೆ ಅಪಾರವಿದೆ. ಸ್ಪಷ್ಟ ಬಹುತ ಪಡೆದು ಎರಡು ಬಾರಿ ಸಿದ್ದರಾಮಯ್ಯ ರಾಜ್ಯದ ಮುಖ್ಯಮಂತ್ರಿ ಆಗಿದ್ದಾರೆ ಎಂದರು.

ಜಯದೇವ ಆಸ್ಪತ್ರೆ, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಿಸಿದ್ದ ಸಿದ್ದರಾಮಯ್ಯ, ರಾಜಪಥ ಮಾಡಿಸಿದ್ದು ಸಿದ್ದರಾಮಯ್ಯ.40 ವರ್ಷದಿಂದ ವಿಧಾನಸಭೆಗೆ ಹೋಗಿದ್ದಾರೆ. ರಸ್ತೆಗೆ ಅವರ ಹೆಸರು ಇಡುವುದರಲ್ಲಿ ತಪ್ಪೆನಿದೆ.ಈ ವಿಚಾರದಲ್ಲಿ ತಕರಾರು ಎತ್ತುವುದು ಮೊಸರಲ್ಲಿ ಕಲ್ಲು ಹುಡುಕಿದಂತೆ ಆಗುತ್ತದೆ ಎಂದು ಹೇಳಿದರು.

ಸಾಧಕರು ಬರಿ ಬಿಜೆಪಿಯಲ್ಲಿ ಮಾತ್ರ ಇಲ್ಲ. ಎಲ್ಲಾ ಪಕ್ಷದಲ್ಲೂ ಇದ್ದಾರೆ. ಸಿದ್ದರಾಮಯ್ಯ ಅವರ ಹೆಸರಿಡುವ ವಿಚಾರದಲ್ಲಿ ಪಕ್ಷಬೇಧ ಮಾಡಿ ಸಣ್ಣತನ ತೋರಿಸಬೇಡಿ ಎಂದು ಮನವಿ ಮಾಡಿದರು.


Share It

You cannot copy content of this page