ನವದೆಹಲಿ: ‘ಒಂದು ದೇಶ,ಒಂದು ಚುನಾವಣೆ’ ಮಸೂದೆಗೆ ಕೇಂದ್ರ ಸಚಿವ ಸಂಪುಟ ಸಭೆ ಗುರುವಾರ ಅನುಮೋದನೆ ನೀಡಿದ್ದು ಪ್ರಸ್ತುತ ನಡೆಯುತ್ತಿರುವ ಸಂಸತ್ ಚಳಿಗಾಲದ ಅಧಿವೇಶನದಲ್ಲೇ ಕೇಂದ್ರ ಸರ್ಕಾರ ಮಸೂದೆಯನ್ನು ಮಂಡಿಸುವ ಸಾಧ್ಯತೆ ದಟ್ಟವಾಗಿದೆ.
ಗುರುವಾರ ಪ್ರಧಾನಿ ನರೇಂದ್ರ ಮೋದಿಯವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಂಪುಟ ಸಭೆಯಲ್ಲಿ ಒಂದು ದೇಶ,ಒಂದು ಚುನಾವಣೆ’ ಮಸೂದೆಗೆ ಒಪ್ಪಿಗೆ ನೀಡಿದೆ ಎನ್ಬಲಾಗಿದೆ.
ಲೋಕಸಭೆ ಮತ್ರು ರಾಜ್ಯ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸುವುದು ಇದರ ಮುಖ್ಯ ಉದ್ದೇಶವಾಗಿದೆ.ಏಕಕಾಲಕ್ಕೆ ಚುನಾವಣೆ ನಡೆಸುವಂತೆ ರಾಮನಾಥ್ ಕೋವಿಂದ್ ಅವರ ನೇತೃತ್ವದಲ್ಲಿ ಉನ್ನತಮಟ್ಟದ ಸಮಿತಿ ಶಿಫಾರಸು ಮಾಡಿದೆ.