ಬೆಂಗಳೂರು: 402 ಸಬ್ ಇನ್‌ಸ್ಪೆಕ್ಟರ್ ನೇಮಕಾತಿ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ರಾಜ್ಯ ಪೊಲೀಸ್ ನೇಮಕಾತಿ ವಿಭಾಗ ಗುರುವಾರ ಪ್ರಕಟಿಸಿದೆ.
2023ರ ಫೆ.1ರ ಸುತ್ತೋಲೆ ಅನ್ವಯ ಈ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಈ ಆಯ್ಕೆ ಪಟ್ಟಿಯೂ ಹೈಕೋಟ್೯ನಲ್ಲಿ ಸಲ್ಲಿಕೆಯಾಗಿರುವ ಮೇಲ್ಮನವಿಯ ಅಂತಿಮ ತೀರ್ಪಿಗೆ ಒಳಪಟ್ಟಿರುತ್ತದೆ. ಹಾಗೆಯೇ 2020ರ ಜು.6 ರ ಸುತ್ತೋಲೆ ಅನ್ವಯ ಆಯ್ಕೆ ಪಟ್ಟಿಯಿಂದ ಹೊರಗುಳಿಯುವ ಕಲ್ಯಾಣ ಕರ್ನಾಟಕ ವೃಂದದ ಅಭ್ಯರ್ಥಿಗಳಿಗೆ ಅನುಗುಣವಾಗಿ ಹುದ್ದೆಗಳನ್ನು ಕಲ್ಯಾಣ ಕರ್ನಾಟಕ ವೃಂದದಲ್ಲಿ ಕಾಯ್ದಿರಿಸಲಾಗಿದೆ ಎಂದು ಇಲಾಖೆ ತಿಳಿಸಿದೆ.