ಮಂಡ್ಯ: ಪೊಲೀಸ್ ಠಾಣೆಯಲ್ಲಿಯೇ ಪೊಲೀಸ್ ಸಿಬ್ಬಂದಿ ಹಾಗೂ ವ್ಯಕ್ತಿಯೋರ್ವ ಠಾಣೆಯಲ್ಲೆ ಪರಸ್ಪರ ಬೈದಾಡಿಕೊಂಡು ಕೊರಳಪಟ್ಟಿ ಹಿಡಿದು ಹಿಡಿದು ಪರಸ್ಪರ ಹಲ್ಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಪಾಂಡವಪುರದಲ್ಲಿ ನಡೆದಿದೆ.
ಜಮೀನು ವಿವಾದದ ಸಂಬಂಧ ಸಾಗರ್ ಎಂಬ ವ್ಯಕ್ತಿಯ ವಿರುದ್ಧ ಪಾಂಡವಪುರ ಪೊಲೀಸ್ ಠಾಣೆಗೆ ದೂರು ಬಂದಿತ್ತು. ದೂರಿನ ಹಿನ್ನೆಲೆಯಲ್ಲಿ ವಿಚಾರಣೆಗಾಗಿ ಸಾಗರ್ ಎಂಬುವರನ್ನು ಪೊಲೀಸರು ಠಾಣೆಗೆ ಕರೆಸಿದ್ದರು ಎನ್ನಲಾಗಿದೆ.
ಈ ವೇಳೆ ಕಾನ್ಸ್‌ಟೇಬಲ್ ಅಭಿಷೇಕ್ ಹಾಗೂ ಸಾಗರ್ ನಡುವೆ ಮಾತಿನ ಚಕಮಕಿ ಆಗಿದೆ. ಈ ವೇಳೆ ಕಾನ್ಸ್‌ಟೇಬಲ್ ಅಭಿಷೇಕ್ ಸಾಗರ್‌ಗೆ ಒಂದು ಏಟು ಹೊಡೆದಿದ್ದಾರೆ. ನಂತರ ಸಾಗರ್ ಎಂಬ ವ್ಯಕ್ತಿ ಪೇದೆ ಅಭಿಷೇಕ್‌ಗೆ ಹೊಡೆದಿದ್ದಾರೆ. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ವೈರಲ್ ಆಗಿರುವ ವಿಡಿಯೋದಲ್ಲಿ ಕಾನ್ಸ್‌ಟೇಬಲ್ ಅಭಿಷೇಕ್ ಎಂಬುವರೆ ಮೊದಲು ಸಾಗರ್ ಎಂಬ ವ್ಯಕ್ತಿಗೆ ಕಪಾಳಕ್ಕೆ ಹೊಡೆಯುವ ದೃಶ್ಯವಿದ್ದು, ಪೊಲೀಸ್ ಕಾನ್ಸ್‌ಟೇಬಲ್ ವರ್ತನೆಗೆ ಸಾರ್ವಜನಿಕರು ಅಸಮಾಧಾನ ಹೊರಹಾಕಿದ್ದು. ತನಿಖೆಯಿಂದಷ್ಟೆ ತಪ್ಪಿತಸ್ಥರು ಯಾರು,ಹಲ್ಲೆಗೆ ನಿಜವಾದ ಕಾರಣ ಏನು ಎಂಬುದು ತಿಳಿಯಲಿದೆ.