ಮುಂಬೈ: ರಿಲಯನ್ಸ್ ಫೌಂಡೇಷನ್‌ನಿಂದ ಪದವಿ ವಿದ್ಯಾರ್ಥಿಗಳಿಗೆ ನೀಡಲಾಗುವ ವಿದ್ಯಾರ್ಥಿ ವೇತನಕ್ಕೆ 2024-25ನೇ ಸಾಲಿಗೆ ಆಯ್ಕೆಯಾದ ಅಭ್ಯರ್ಥಿಗಳ ಪಟ್ಟಿ ಅಂತಿಮವಾಗಿದೆ.
ಭಾರತದಾದ್ಯಂತ 5,000 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ಕರ್ನಾಟಕದಿಂದ 590 ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನಕ್ಕೆ ಆಯ್ಕೆಯಾಗಿ ದ್ದಾರೆ. ವಿದ್ಯಾರ್ಥಿಯ ಬೋಧನಾ ಶುಲ್ಕ (ಟ್ಯೂಷನ್ ಡಿ ಫೀ), ಹಾಸ್ಟೆಲ್ ವೆಚ್ಚ ಮತ್ತು ಇತರ ಶೈಕ್ಷಣಿಕ ಶುಲ್ಕವನ್ನು ವಿದ್ಯಾರ್ಥಿ ವೇತನ ಭರಿಸುತ್ತದೆ.
ಆಯ್ಕೆಯಾದ ವಿದ್ಯಾರ್ಥಿಗಳಿಗೆ ₹2 ಲಕ್ಷ ತನಕ ವಿದ್ಯಾರ್ಥಿ ವೇತನ ದೊರೆಯುತ್ತದೆ. 1996ರಲ್ಲಿ ಶುರುವಾದ ಯೋಜನೆ ಅಡಿಯಲ್ಲಿ ಈವರೆಗೆ 28,000ಕ್ಕೂ ಅಧಿಕ ವಿದ್ಯಾರ್ಥಿಗಳು ಲಾಭ ಪಡೆದುಕೊಂಡಿದ್ದಾರೆ.