ಬೆಂಗಳೂರು: ಹೊಸವರ್ಷಾಚರಣೆಯ ಹಿನ್ನಲೆಯಲ್ಲಿ ಡಿಸೆಂಬರ್ 31ರಂದು ರಾತ್ರಿ ಬೆಂಗಳೂರಿನಲ್ಲಿ ನ್ಯೂ ಇಯರ್ ಸಂಭ್ರಮವನ್ನು ಅದ್ದೂರಿಯಾಗಿ ಆಚರಣೆ ಮಾಡುವ ನಗರದ ಎಂಜಿ ರಸ್ತೆ, ಬ್ರಿಗೇಡ್ ರಸ್ತೆ ಚರ್ಚ್‌ಸ್ಟ್ರೀಟ್‌ನಲ್ಲಿ ಭರ್ಜರಿ ಸಿದ್ಧತೆಗಳು ನಡೆದಿವೆ.
ಹಾಗಾಗಿ ಹೊಸ ವರ್ಷದ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ನಮ್ಮ ಮೆಟ್ರೋ ಸೇವೆ ಅವಧಿ ವಿಸ್ತರಣೆ ಮಾಡಲಾಗಿದೆ. ನೇರಳೆ, ಹಸಿರು ಮಾರ್ಗ ಮೆಟ್ರೋ ರೈಲು ಸೇವೆಗಳ ಸಮಯ ವಿಸ್ತರಿಸಲಾಗಿದೆ. ಜೊತೆಗೆ ಬಿಎಂಟಿಸಿ ಬಸ್ ಸೇವೆಯು ತಡರಾತ್ರಿಯ ವರೆಗೆ ವಿಸ್ತರಣೆ ಮಾಡಲಾಗಿದೆ.