ತಿರುವನಂತಪುರ: ಟ್ಯೂಷನ್ ಗೆ ಹೋಗಿದ್ದ ವೇಳೆ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ್ದ ಶಿಕ್ಷಕನಿಗೆ ತಿರುವನಂತಪುರದ ವಿಶೇಷ ತ್ವರಿತ ನ್ಯಾಯಾಲಯ 111 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಮತ್ತು 1.05 ಲಕ್ಷ ರೂ.ದಂಡ ವಿಧಿಸಿ ತೀರ್ಪು ನೀಡಿದೆ.
ಮನೋಜ್ (44) ಎಂಬಾತನೆ ಶಿಕ್ಷೆಗೊಳಗಾದವನಾಗಿದ್ದು, ಅಪರಾಧಿ ಮನೋಜ್ 1.05 ಲಕ್ಷ ರೂ.ದಂಡ ಪಾವತಿಸಲು ಸಾಧ್ಯವಾಗದಿದ್ದರೆ ಹೆಚ್ಚುವರಿಯಾಗಿ ಒಂದು ವರ್ಷ ಜೈಲು ಶಿಕ್ಷೆ ಅನುಭವಿಸಬೇಕು ಎಂದು ನ್ಯಾಯಾಲಯ ಆದೇಶಿಸಿದೆ.
ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಪತಿ ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣ ತಿಳಿಯುತ್ತಿದ್ದಂತೆ ಮನನೊಂದ ಅಪರಾಧಿ ಮನೋಜ್ ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.