ಮಧುಗಿರಿ: ಜಮೀನು ವ್ಯಾಜ್ಯದ ಸಂಬಂಧ ದೂರು ನೀಡಲು ಬಂದ ಮಹಿಳೆಯನ್ನು ಪುಸಲಾಯಿಸಿ ತನ್ನ ಕಚೇರಿಯಲ್ಲೇ ಮಧುಗಿರಿ ಡಿವೈಎಸ್ಪಿ ರಾಮಚಂದ್ರಪ್ಪ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿರುವ ವಿಡಿಯೋ ಗುರುವಾರ ವೈರಲ್ ಆಗಿದೆ.
ಮಧುಗಿರಿ ಡಿವೈಎಸ್ಪಿ ಜಮೀನು ವ್ಯಾಜ್ಯದ ಬಗ್ಗೆ ದೂರು ಕೊಡಲು ಬಂದ ಪಾವಗಡದ ಮಹಿಳೆಯನ್ನು ತನ್ನ ಕಚೇರಿಯಲ್ಲಿನ ಶೌಚಾಲಯಕ್ಕೆ ಕರೆದುಕೊಂಡು ಅಸಭ್ಯವಾಗಿ ವರ್ತಿಸಿದ್ದಾರೆ ಎನ್ನಲಾಗಿದ್ದು. ಇದನ್ನು ಕಿಟಕಿಯ ಮೂಲಕ ವ್ಯಕ್ತಿಯೊಬ್ಬ ಚಿತ್ರೀಕರಿಸಿ ಸಾಮಾಜಿಕ ಜಾಲತಾಣಕ್ಕೆ ಹರಿ ಬಿಟ್ಟಿದ್ದು ವಿಡಿಯೋ ಎಲ್ಲೆಡೆ ವೈರೆಲ್ ಆಗಿದೆ. ಈ ವಿಡಿಯೋ ಬಗ್ಗೆ ಪ್ರತಿಕ್ರಿಯಿಸಿರುವ ಎಸ್ಪಿ ಅಶೋಕ್ ಅವರು ಪರಿಶೀಲಿಸಿ ಸೂಕ್ತ ಕಾನೂನು ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.