ಸುದ್ದಿ

ಹೃದಯಾಘಾತ; ಶಾಲೆಯಲ್ಲೆ ಕುಸಿದು ಬಿದ್ದು 8 ವರ್ಷದ ಬಾಲಕಿ ಸಾವು

Share It

ಚಾಮರಾಜನಗರ: 3ನೇ ತರಗತಿ ಓದುತ್ತಿದ್ದ 8 ವರ್ಷದ ಬಾಲಕಿ ಶಾಲಾ ಕೊಠಡಿಯಲ್ಲಿ ಕುಸಿದುಬಿದ್ದು ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಚಾಮರಾಜನಗರದ ಖಾಸಗಿ ಶಾಲೆಯೊಂದರಲ್ಲಿ ನಡೆದಿದೆ.

ಮೃತ ಬಾಲಕಿಯನ್ನು ಬದನಗುಪ್ಪೆಯ ಗ್ರಾಮದ ಲಿಂಗರಾಜು, ಶೃತಿ ದಂಪತಿಯ ಪುತ್ರಿ ತೇಜಸ್ವಿನಿ (8) ಎಂದು ಗುರುತಿಸಲಾಗಿದೆ.

ಬಾಲಕಿ ಬೆಳಗ್ಗೆ ಶಾಲೆಗೆ ಹೋಗಿದ್ದಳು. ತರಗತಿಯಲ್ಲಿ ಶಿಕ್ಷಕರಿಗೆ ನೋಟ್ಸ್ ತೋರಿಸಲು ಹೋಗುತ್ತಿದ್ದಂತೆ ವಿದ್ಯಾರ್ಥಿನಿ ಹೃದಯ ಸ್ತಂಭನದಿಂದ (Cardiac Arrest) ಕುಸಿದು ಬಿದ್ದಿದ್ದಾಳೆ. ಕುಸಿದು ಬಿದ್ದ ವಿದ್ಯಾರ್ಥಿನಿಯನ್ನು ಶಿಕ್ಷಕರು ತಕ್ಷಣ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆಸ್ಪತ್ರೆಯಲ್ಲಿ ವಿದ್ಯಾರ್ಥಿನಿ ಕೊನೆಯುಸಿರೆಳೆದಿದ್ದಾಳೆ.


Share It

You cannot copy content of this page