ಬೆಂಗಳೂರು: ಪೊಲೀಸ್ ಇಲಾಖೆಗೆ ನಕಲಿ ದಾಖಲೆಗಳು ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬ್ಯಾಡರಹಳ್ಳಿ ಠಾಣೆ ಸಬ್‌ಇನ್ಸ್‌ಪೆಕ್ಟರ್ ಕಾಶಿಲಿಂಗೇಗೌಡರನ್ನು ಅಮಾನತು ಮಾಡಿ, ಬೆಂಗಳೂರು ಪಶ್ಚಿಮ ವಿಭಾಗದ ಡಿಸಿಪಿ ಗಿರೀಶ್ ಆದೇಶ ಹೊರಡಿಸಿದ್ದಾರೆ.
ನಕಲಿ ದಾಖಲೆ ನೀಡಿದ ಸಂಬಂಧ ವಿಧಾನಸೌಧ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೇ ಪ್ರಕರಣದಲ್ಲಿ ಸಬ್‌ಇನ್ಸ್‌ಪೆಕ್ಟರ್ ಕಾಶಿಲಿಂಗೇಗೌಡ ಜಾಮೀನು ಪಡೆದುಕೊಂಡಿದ್ದರು.
ನಕಲಿ ಜನ್ಮ ದಿನಾಂಕ ಹೊಂದಿರುವ ದಾಖಲೆಯನ್ನು ನೀಡಿ ಕೆಲಸ ಪಡೆದುಕೊಂಡ ಆರೋಪದಡಿ ಸಬ್‌ಇನ್ಸ್ ಪೆಕ್ಟರ್ ಕಾಶಿಲಿಂಗೇಗೌಡ ವಿರುದ್ಧ ಬೆಂಗಳೂರು ಪೊಲೀಸ್ ಇಲಾಖೆಯ ಆಡಳಿತ ವಿಭಾಗದ ಅಧಿಕಾರಿ ಎಸ್. ಟಿ. ಚಂದ್ರಶೇಖರ್ ನೀಡಿರುವ ದೂರಿನ ಮೇರೆಗೆ ವಿಧಾನಸೌಧ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿತ್ತು.