ಸುದ್ದಿ

ವೃತ್ತಿಪರ ಕೋಸ್೯; ಏಪ್ರಿಲ್ 16 ರಂದು ಸಿಇಟಿ ಪರೀಕ್ಷೆ; ಜನವರಿ 26ರಿಂದ ಆನ್‌ಲೈನ್ ಅರ್ಜಿ ಸಲ್ಲಿಕೆ

Share It

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ)-2025ರ ವೇಳಾಪಟ್ಟಿ ಪ್ರಕಟಿಸಿದೆ. ಈ ಪರೀಕ್ಷೆ ಬರೆಯಲು ಬಯಸುವ ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ಜನವರಿ 23 ರಿಂದ ಫೆಬ್ರವರಿ 21ರ ತನಕ ಅರ್ಜಿ ಸಲ್ಲಿಕೆ ಮಾಡಿ ನೋಂದಣಿ ಮಾಡಿಕೊಳ್ಳಬಹುದು. ಇಂಜಿನಿಯರಿಂಗ್‌, ಪಶು ವೈದ್ಯಕೀಯ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಸಿಇಟಿ ಪರೀಕ್ಷೆಯನ್ನು ನಡೆಸಲಾಗುತ್ತದೆ.

ಉನ್ನತ ಶಿಕ್ಷಣ ಸಚಿವ ಡಾ. ಎಂ. ಸಿ. ಸುಧಾಕರ್ ಗುರುವಾರ ಸಿಇಟಿ-2025ರ ವೇಳಾಪಟ್ಟಿಯನ್ನು ಘೋಷಣೆ ಮಾಡಿದರು. 2025ನೇ ಸಾಲಿನ ಸಿಇಟಿ ಪರೀಕ್ಷೆ ಏಪ್ರಿಲ್ 16, 17ರಂದು ನಡೆಯಲಿದೆ. ಪರೀಕ್ಷೆ ಬರೆಯುವ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ನೋಂದಣಿ ಮಾಡಿಕೊಳ್ಳಬೇಕು.

ಸಚಿವ ಡಾ. ಎಂ.ಸಿ.ಸುಧಾಕರ್ ಯೋಗ ಮತ್ತು ನ್ಯಾಚುರೋಪತಿ, ಬಿ-ಫಾರ್ಮ ಮತ್ತು ಫಾರ್ಮ-ಡಿ, ಕೃಷಿ ವಿಜ್ಞಾನ ಕೋರ್ಸ್ ಮತ್ತು ಬಿಎಸ್‌ಸಿ (ನರ್ಸಿಂಗ್ ಕೋರ್ಸ್‌ಗಳ ಪ್ರವೇಶಕ್ಕೂ ಸಿಇಟಿ ಪರೀಕ್ಷೆಯ ಅಂಕಗಳನ್ನು ಪರಿಗಣಿಸಲಾಗುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ.

ಸಿಇಟಿ ಪರೀಕ್ಷೆಗೆ ಅರ್ಜಿಯು ಸಾಮಾನ್ಯವಾಗಿರುತ್ತದೆ. ಆದ್ದರಿಂದ ವೈದ್ಯಕೀಯ, ದಂತ ವೈದ್ಯಕೀಯ, ಆಯುಷ್ ಪ್ರವೇಶಾತಿಗೂ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ನೋಂದಾಯಿಸಿಕೊಂಡು ಅರ್ಜಿ ಶುಲ್ಕ ಪಾವತಿ ಮಾಡಬೇಕು. ಆರ್ಕಿಟೆಕ್ಟರ್, ಬಿಪಿಟಿ, ಬಿಪಿಒ, ಬಿಎಸ್‌ಸಿ ಅಲೈಡ್, ಹೆಲ್ತ್‌ ಸೈನ್ಸ್‌ ಕೋರ್ಸ್‌ಗಳ ಪ್ರವೇಶಾತಿಗೆ ಸಹ ಇದೇ ಅರ್ಜಿ ಅನ್ವಯವಾಗಲಿದೆ ಎಂದು ಕೆಇಎ ಹೇಳಿದೆ.


Share It

You cannot copy content of this page