ಬೆಂಗಳೂರು: ರಾಜ್ಯದಲ್ಲಿ ಹೆಚ್ವುತ್ತಿರುವ ಗೋಹಿಂಸೆ ಮತ್ತು ಗೋಹತ್ಯೆ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ ತನಿಖೆಗೆ ಆದೇಶಿಸಿದೆ.
ಇತ್ತೀಚೆಗೆ ಚಾಮರಾಜಪೇಟೆ ಹಸು ಕೆಚ್ಚಲು ಕೊಯ್ದ ಘಟನೆ ಬೆನ್ನಲ್ಲೇ ಹೊನ್ನಾವರದಲ್ಲಿ ಹಸು ಕೊಂದಿರುವ ಘಟನೆಗಳು ನಡೆದ ಹಿನ್ನೆರ ಎಲ್ಲೆಡೆ ತೀವ್ರ ವಿರೋಧ ಹಾಗೂ ಟೀಕೆಗಳು ವ್ಯಕ್ತವಾಗುತ್ತಿವೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಡಾ. ಪರಮೇಶ್ವರ್ ಅವರು, ರಾಜ್ಯದಲ್ಲಿ ನಡೆಯುತ್ತಿರುವ ಗೋಹತ್ಯೆ ಹಾಗೂ ಗೋಹಿಂಸೆ ಪ್ರಕರಣಗಳಿಗೆ ಪರಿಹಾರ ಕಂಡುಕೊಳ್ಳುವ ಅಗತ್ಯವಿದೆ. ಈ ಘಟನೆಗಳನ್ನು ಗಂಭೀರವಾಗಿ ಪರಿಗಣಿಸುವಂತೆ ಪೊಲೀಸರಿಗೆ ಮತ್ತೊಮೆ ಸೂಚನೆ ನೀಡಿದ್ದೇನೆಂದು ಹೇಳಿದರು.
ಈ ರೀತಿಯ ಮನಸ್ಥಿತಿ ಇರುವವರನ್ನು ಮೊದಲು ಗುರುತಿಸಬೇಕು. ಕೃತ್ಯದ ಹಿಂದೆ ಬೇರೆ ಯಾರಾದ್ದಾದರೂ ಪ್ರಚೋದನೆ ಇದೆಯೇ? ಅಥವಾ ವೈಯಕ್ತಿಕವಾಗಿ ಕೃತ್ಯ ಎಸಗುತ್ತಿದ್ದಾರೆಯೇ ಅಥವಾ ಸಂಘಟನೆಗಳಿವೆಯೇ ಎಂಬೆಲ್ಲಾ ವಿಚಾರಗಳನ್ನು ತನಿಖೆ ನಡೆಸುವಂತೆ ಪೊಲೀಸರಿಗೆ ಸೂಚನೆ ನೀಡಿದ್ದೇನೆ ಎಂದು ಹೇಳಿದರು.