ಮಂಡ್ಯ: ಇ-ಖಾತಾ ಮಾಡಿಕೊಡಲು ₹25 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ ಕೆ.ಶೆಟ್ಟಹಳ್ಳಿ ಗ್ರಾಮ ಪಂಚಾಯಿತಿ ಪ್ರಭಾರ ಪಿಡಿಒ ದಯಾನಂದ್ ಮಂಗಳವಾರ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ.
ಕೆ.ಶೆಟ್ಟಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹನುಮಂತನಗರದ ಅಶ್ವತ್ ಎಂಬುವವರು ಇ-ಖಾತಾ ಮಾಡಿಕೊಡಲು ಅರ್ಜಿ ಸಲ್ಲಿಸಿದ್ದರು. ಪಿಡಿಒ ದಯಾನಂದ್ ₹25 ಸಾವಿರ ನೀಡುವಂತೆ ಬೇಡಿಕೆಯಿಟ್ಟಿದ್ದರು.
ಅಶ್ವತ್ಥ ಅವರು ₹13 ಸಾವಿರವನ್ನು ಆನ್‌ಲೈನ್ ಮೂಲಕ ಪಾವತಿಸಿದ್ದರು. ಉಳಿದ ₹12 ಸಾವಿರವನ್ನು ಆನಂತರ ಕೊಡುವುದಾಗಿ ತಿಳಿಸಿ, ಲೋಕಾಯುಕ್ತ ಪೊಲೀಸರಿಗೆ ದೂರು ಸಲ್ಲಿಸಿದ್ದರು.
ಎಸ್ಪಿ ಸುರೇಶ್‌ಬಾಬು ಮಾರ್ಗದರ್ಶನದಲ್ಲಿ ಲೋಕಾಯುಕ್ತ ಇನ್‌ಸ್ಪೆಕ್ಟರ್ ಜಯರತ್ನಾ ಮತ್ತು ಸಿಬ್ಬಂದಿ ಕಾರ್ಯಾಚರಣೆ ನಡೆಸಿ, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.