ಬೆಂಗಳೂರು: ಮಾಹಿತಿ ಆಯೋಗದ ಮುಖ್ಯ ಆಯುಕ್ತ ಮತ್ತು ರಾಜ್ಯ ಆಯುಕ್ತರ ಹುದ್ದೆ ಭರ್ತಿ ಮಾಡಿರುವ ರಾಜ್ಯ ಸರ್ಕಾರ, ಮುಖ್ಯ ಮಾಹಿತಿ ಆಯುಕ್ತರನ್ನಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಎಂ.ಪ್ರಸಾದ್ ಅವರನ್ನು ನೇಮಿಸಿ ಆದೇಶಿಸಿದೆ.
ಏಳು ಮಂದಿಯನ್ನು ರಾಜ್ಯ ಮಾಹಿತಿ ಆಯುಕ್ತರನ್ನಾಗಿ ನೇಮಿಸಿದ್ದು, ಕೆ.ರಾಮನ್, ಡಾ.ಹರೀಶ್ ಕುಮಾರ್, ರುದ್ರಣ್ಣ ಹರ್ತಿಕೋಟೆ, ನಾರಾ ಯಣ್ ಜಿ.ಚನ್ನಾಳ್, ಎಸ್.ರಾಜಶೇಖರ, ಕೆ.ಬದ್ರುದ್ದಿನ್ ಮತ್ತು ನಿವೃತ್ತ ಐಎಎಸ್ ಅಧಿಕಾರಿ ಡಾ.ಬಿ.ಆರ್. ಮಮತಾ ಅವರನ್ನು ನೇಮಕ ಮಾಡಿ ಆದೇಶ ಮಾಡಿದೆ.