ಹೈದರಾಬಾದ್ : ಅಧಿಕ ಲಾಭದ ಆಸೆಯಿಂದ ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ವ್ಯವಹಾರದಲ್ಲಿ ₹ 1 ಕೋಟಿ ರೂಪಾಯಿ ನಷ್ಟ ಅನುಭವಿಸಿದ್ದ ಪೊಲೀಸ್ ಕಾನ್ಸ್‌ಟೇಬಲ್ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್‌ನ ಅಂಬರಪೇಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮೃತ ಪೇದೆಯನ್ನು ವೆಂಕಟೇಶ್( 41) ಎಂದು ಗುರುತಿಸಲಾಗಿದೆ. ಇವರು ಮದನಪೇಟ್ ಪೊಲೀಸ್ ಠಾಣೆಯಲ್ಲಿ ನಿಯೋಜನೆಗೊಂಡಿದ್ದರು. ಅಂಬರಪೇಟ್‌ನ ದುರ್ಗಾ ನಗರದಲ್ಲಿರುವ ತಮ್ಮ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ವೆಂಕಟೇಶ್ ಪಾಲಕರ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಆತ್ಮಹತ್ಯೆ ಮಾಡಿಕೊಂಡ ಪೇದೆ ವೆಂಕಟೇಶ್ ಸೂರ್ಯಪೇಟ್ ಜಿಲ್ಲೆಯವರು. ಅವರಿಗೆ ಒಬ್ಬ ಮಗಳು ಮತ್ತು ಒಬ್ಬ ಮಗ ಇದ್ದಾರೆ. ಆರ್ಥಿಕ ನಷ್ಟ ಅನುಭವಿಸಿದ್ದರಿಂದ ಖಿನ್ನತೆಗೆ ಒಳಗಾಗಿದ್ದರು ಆ ನೋವಿನಿಂದ ಹೊರಬರಲಾಗದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.