ಸುದ್ದಿ

ಲಂಚ ಪ್ರಕರಣ; ರೆವಿನ್ಯೂ ಇನ್ಸ್‌ಪೆಕ್ಟರ್ ಸೇರಿ ಮೂವರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ

Share It

ದೇವನಹಳ್ಳಿ: ಲಂಚ ಸ್ವೀಕರಿಸುವ ವೇಳೆ ರೆವಿನ್ಯೂ ಇನ್ಸ್‌ಪೆಕ್ಟರ್ ಸೇರಿ ಇಬ್ಬರು ಗ್ರಾಮಲೆಕ್ಕಾಧಿಕಾರಿಗಳು ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ವಿಜಯಪುರದಲ್ಲಿ ನಡೆದಿದೆ.

ಜಮೀನು ಪೌತಿ ಖಾತೆ ಮಾಡಿಕೊಡಲು ವ್ಯಕ್ತಿಯೊಬ್ಬರ ಬಳಿ 2.5 ಲಕ್ಷ ಲಂಚ ಸ್ವೀಕರಿಸುತ್ತಿದ್ದ ವೇಳೆ ಮೂವರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಎಳುವಳ್ಳಿ ಗ್ರಾಮಲೆಕ್ಕಾಧಿಕಾರಿ ಮಡಿವಾಳಪ್ಪ ಹಾಗೂ ವಿಜಯಪುರ ಗ್ರಾಮಲೆಕ್ಕಾಧಿಕಾರಿ ಸುನಿಲ್ ಲೋಕಾಯುಕ್ತಕ್ಕೆ ಸಿಕ್ಕಿಬಿದ್ದಿದ್ದು ವಿಜಯಪುರದ ರಾಜಸ್ವ ನಿರೀಕ್ಷಕ(ಆರ್ ಐ) ಸತ್ಯನಾರಾಯಣ ಪರಾರಿಯಾಗಿದ್ದಾರೆ.

ಮೂವರು ಅಧಿಕಾರಿಗಳು ಗೌತಮ್ ಎನ್ನುವವರ ಬಳಿ ಜಮೀನು ಪೌತಿ ಖಾತೆ ಪೋಡಿ ಮಾಡಿಕೊಡಲು 2.5 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ವೇಳೆ ಲಂಚ ಸ್ವೀಕರಿಸುತ್ತಿದ್ದ ಇಬ್ಬರು ಗ್ರಾಮ ಲೆಕ್ಕಧಿಕಾರಿಗಳನ್ನು ಲೋಕಾಯುಕ್ತ ಪೊಲೀಸರು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ. ಲೋಕಾಯುಕ್ತ ಎಸ್ಪಿ ಪವನ್ ನೆಜ್ಜುರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ.


Share It

You cannot copy content of this page