ದಾವಣಗೆರೆ: ಟ್ರಾಫಿಕ್ ಪೊಲೀಸರ ವಿಶೇಷ ಕಾರ್ಯಾಚರಣೆ ವೇಳೆ ಅಪ್ರಾಪ್ತ ಬಾಲಕ ಬೈಕ್ ಚಲಾಯಿಸಿದ್ದು ಈ ಪ್ರಕರಣ ಸಂಬಂಧ ಅಪ್ರಾಪ್ತನಿಗೆ ವಾಹನ ಚಲಾಯಿಸಲು ಕೊಟ್ಟಿದ್ದ ಮಾಲೀಕನಿಗೆ ಕೋರ್ಟ್ ₹25 ಸಾವಿರ ದಂಡ ದಂಡ ವಿಧಿಸಿದೆ.
ಜ.25 ರಂದು ದಾವಣಗೆರೆ ಟ್ರಾಫಿಕ್ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸುತ್ತಿರುವ ವೇಳೆ ಈ ಘಟನೆ ನಡೆದಿದೆ. ಅಪ್ರಾಪ್ತ ಬಾಲಕ ನಗರದ ಎಆರ್‌ಜಿ ಕಾಲೇಜ್ ಬಳಿ ಆಕ್ಟಿವ್ ಹೊಂಡ ಬೈಕ್ ಚಲಾಯಿಸಿಕೊಂಡು ಬಂದಿದ್ದನ್ನು ಪೊಲೀಸರು ತಡೆದು ಪರಿಶೀಲನೆ ನಡೆಸಿದ್ದಾರೆ. ಬೈಕ್ ಅನ್ನು ಜಪ್ತಿ ಮಾಡಿಕೊಂಡು ದಾವಣಗೆರೆ ದಕ್ಷಿಣ ಸಂಚಾರ ಠಾಣೆಯಲ್ಲಿ ಇಂಡಿಯನ್ ಮೋಟಾರ್ ವೆಹಿಕಲ್ ಆಕ್ಟ್ ಅಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ದಾವಣಗೆರೆ ನ್ಯಾಯಾಲಯಕ್ಕೆ ಬೈಕ್ ಮಾಲೀಕರ ವಿರುದ್ಧ ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯ ಪೊಲೀಸರು ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು ಈ ಪ್ರಕರಣದ ವಿಚಾರಣೆ ನಡೆಸಿದ 3ನೇ ಎಎಸ್ ಸಿಜೆ ಮತ್ತು ಜೆಎಂಎಫ್ ಸಿ ಕೋಟ್೯ ಅಪ್ರಾಪ್ತ ಬಾಲಕನಿಗೆ ವಾಹನ ಚಾಲನೆ ಮಾಡಲು ಕೊಟ್ಟಿದ್ದು ಅಪರಾಧ ಎಂದು ಪರಿಗಣಿಸಿ ವಾಹನ ಮಾಲೀಕನಿಗೆ ₹ 25,000 ರೂ.ಗಳ ದಂಡವನ್ನು ವಿಧಿಸಿ ಆದೇಶಿಸಿದೆ.