ಬೆಂಗಳೂರು: ಕಿಂಗ್‌ಫಿಷರ್ ಏರ್‌ಲೈನ್ಸ್ ಗೆ ಸಂಬಂಧಿಸಿದ ಸಾಲ ವಸೂಲಾತಿ ಪ್ರಕ್ರಿಯೆಗೆ ತಡೆ ವಿಧಿಸುವಂತೆ ಕೋರಿ ದೇಶಭ್ರಷ್ಟ ಉದ್ಯಮಿ ವಿಜಯ್ ಮಲ್ಯ ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಸಾಲ ವಸೂಲಾತಿ ನ್ಯಾಯಮಂಡಳಿಯ ವಸೂಲಾತಿ ಅಧಿಕಾರಿಗಳು, ಭಾರತೀಯ ಸ್ಟೇಟ್ ಬ್ಯಾಂಕ್ ಸೇರಿದಂತೆ ಇತರೆ 10 ಬ್ಯಾಂಕ್ ಗಳಿಗೆ ಹೈಕೋರ್ಟ್ ಬುಧವಾರ ನೋಟಿಸ್ ಜಾರಿ ಮಾಡಿದೆ.
ಈಗಾಗಲೇ ಸಂಸ್ಥೆಯಿಂದ ವಶಪಡಿಸಿಕೊಂಡಿರುವ ಸ್ವತ್ತಿನ ಮಾಹಿತಿ ನೀಡುವಂತೆ ಸಾಲದಾತ ಸಂಸ್ಥೆಗಳಿಗೆ ಆದೇಶಿಸುವಂತೆ ಕೋರಿ ವಿಜಯ್ ಮಲ್ಯ ಸಲ್ಲಿಸಿರುವ ಅರ್ಜಿಗಳ ವಿಚಾರಣೆಯನ್ನು ನ್ಯಾಯಮೂರ್ತಿ ದೇವದಾಸ್ ಅವರ ಏಕಸದಸ್ಯ ಪೀಠವು ನಡೆಸಿತು. ಮುಂದಿನ ವಿಚಾರಣೆಯನ್ನು ಫೆ.19ಕ್ಕೆ ಮುಂದೂಡಿತು