ಬೆಂಗಳೂರು: ಇಂಡಿಯನ್ ರೈಲ್ವೆ ಕೇಟರಿಂಗ್ ಆ್ಯಂಡ್ ಟೂರಿಸಂ ಕಾರ್ಪೋರೇಷನ್ (ಐಆರ್‌ಸಿಟಿಸಿ) ಲಿಮಿಟೆಡ್ ಸಂಸ್ಥೆಯು ಒಂದು ವರ್ಷದ ಅವಧಿಗೆ ಕಂಟ್ರೋಲ್ ಆಫೀಸ್‌ನ 1, ರೈಲ್ವೆ ಸ್ಟೆಷನ್/ಫೀಲ್ಡ್ ಆಫೀಸ್‌ನ 7 ಸಲಹೆಗಾರರ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಿದೆ.
ಅಭ್ಯರ್ಥಿಯು 10ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು, 2025ರ ಜ.22ಕ್ಕೆ ಅನ್ವಯವಾಗುವಂತೆ ಗರಿಷ್ಠ 64 ವರ್ಷದೊಳಗಿರುವವರು ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸಂಬಂಧಿತ ಸ್ವಯಂ ದೃಢೀಕರಿಸಿದ ದಾಖಲೆಗಳೊಂದಿಗೆ ಫೆ.22ರೊಳಗೆ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ irctc.co.in ಭೇಟಿ ನೀಡಬಹುದು.