ದಾವಣಗೆರೆ: ರಾಜ್ಯದಲ್ಲಿ ಸುಮಾರು 50 ಸಾವಿರ ಶಿಕ್ಷಕರ ಕೊರತೆ ಇದ್ದು, ಶೀಘ್ರದಲ್ಲಿ 25 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಕೈಗೊಳ್ಳುವುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು.
ಜಗಳೂರು ತಾಲೂಕಿನ ಉಚ್ಚಂಗಿಪುರ ಗ್ರಾಮದಲ್ಲಿ ನೂತನ ಹೈಟೆಕ್ ಸರ್ಕಾರಿ ಶಾಲಾ ಕಟ್ಟಡ ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು. ಹಂತ ಹಂತವಾಗಿ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ ಎಂದರು.