ಸುದ್ದಿ

ಗೋ ಕಳ್ಳತನ; ಕಂಡಲ್ಲೆ ಶೂಟೌಟ್‌ಗೆ ಆದೇಶ; ಸಚಿವ ಮಂಕಾಳ ವೈದ್ಯ ಎಚ್ಚರಿಕೆ

Share It

ಕಾರವಾರ: ಬಿಜೆಪಿ ಅಧಿಕಾರದಲ್ಲಿದ್ದಾಗಲೂ ಗೋ ಕಳ್ಳತನ ನಡೆದಿತ್ತು. ಬಿಜೆಪಿ ಆಡಳಿತದಲ್ಲಿ ಯಾವುದೇ ಕ್ರಮ ಇರಲಿಲ್ಲ. ಆದರೆ, ನಾವು ಕಠಿಣ ಕ್ರಮ ಕೈಗೊಂಡಿದ್ದೇವೆ ಎಂದು ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಹೇಳಿದರು.

ಉತ್ತರ ಕನ್ನಡ ಜಿಲ್ಲೆಯಲ್ಲಿ ಗೋ ಕಳ್ಳತನ ಈ ಹಿಂದಿನಿಂದಲೂ ನಡೆಯುತ್ತ ಬಂದಿದೆ. ಆದರೆ ಈಗ ನಾವು ಸುಮ್ಮನಿರಲು ಸಾಧ್ಯವಿಲ್ಲ. ಈ ರೀತಿಯ ಪ್ರಕರಣ ಮುಂದುವರಿದರೆ ಗೋ ಕಳ್ಳರ ಮೇಲೆ ಸರ್ಕಲ್‌ನಲ್ಲಿ ನಿಲ್ಲಿಸಿ ಶೂಟೌಟ್ ಮಾಡಲು ಪೊಲೀಸರಿಗೆ ಆದೇಶ ನೀಡಬೇಕಾಗುತ್ತದೆ ಎಂದು ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಎಚ್ಚರಿಕೆ ನೀಡಿದ್ದಾರೆ.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಗೋ ಕಳ್ಳತನ ಹೊಸದೇನೂ ಅಲ್ಲ. ಬಿಜೆಪಿ ಸರಕಾರದ ಅವಧಿಯಲ್ಲೂ ಸಾಕಷ್ಟು ಗೋ ಕಳ್ಳತನ ಪ್ರಕರಣಗಳಾಗಿವೆ. ಆದರೆ ಅವರು ಯಾವುದೇ ಕ್ರಮ ಕೈಗೊಳ್ಳಲಿಲ್ಲ ಆದರೆ ನಾವು ಸುಮ್ಮನಿರುವುದಕ್ಕೆ ಆಗಲ್ಲ ಎಂದರು.

ಜಿಲ್ಲೆಯಲ್ಲಿ ಗೋ ಕಳ್ಳತನ ಬಗ್ಗೆ ಕುಮಟಾ ಶಾಸಕ ದಿನಕರ ಶೆಟ್ಟಿ ಅವರು ಮುಖ್ಯಮಂತ್ರಿ ಹಾಗೂ ಗೃಹ ಸಚಿವರನ್ನು ಟೀಕಿಸಿದ್ದಾರೆ. ಇವರ ಸರಕಾರ ಇರುವಾಗ ಅಧಿಕ ಗೋವು ಕಳ್ಳತನವಾಗಿದ್ದು, ಯಾವುದೇ ರೀತಿಯಾದ ಕ್ರಮವಾಗಿರಲಿಲ್ಲ. ಆದರೆ, ಈಗ ನಾವು ಯಾವುದೇ ಮುಲಾಜಿಲ್ಲದೆ ಗೋ ಕಳ್ಳರ ವಿರುದ್ದ ಕ್ರಮ ತೆಗೆದುಕೊಳ್ಳುತ್ತೇವೆ. ಇನ್ನು ಮುಂದೆ ಜಿಲ್ಲೆಯಲ್ಲಿ ಗೋವು ಕಳ್ಳತನ ಮಾಡಿದವರ ಮೇಲೆ ಸೂಕ್ತ ಕ್ರಮ ಜಾರಿ ಮಾಡುವಂತೆ ಸೂಚಿಸಲಾಗಿದೆ ಎಂದು ಹೇಳಿದರು.


Share It

You cannot copy content of this page