ಸುದ್ದಿ

ನ್ಯಾಕ್ ಮಾನ್ಯತೆಗಾಗಿ ಲಂಚ; ಭ್ರಷ್ಟಾಚಾರದಲ್ಲಿ ಭಾಗಿಯಾದ ವಿಶ್ವವಿದ್ಯಾಲಯಗಳಿಗೆ 5 ವರ್ಷ ನಿಷೇಧ

Share It

ಬೆಂಗಳೂರು: ಲಂಚ ಪ್ರಕರಣಗಳಲ್ಲಿ ಭಾಗಿಯಾದ ವಿಶ್ವವಿದ್ಯಾಲಯಗಳಿಗೆ 5 ವರ್ಷಗಳ ನಿಷೇಧ, ಸಮಿತಿಯ ಸದಸ್ಯರಿಗೆ ಜೀವತಾವಧಿ ನಿಷೇಧ ವಿಧಿಸಲಾಗಿದೆ ಎಂದು ರಾಷ್ಟ್ರೀಯ ಮೌಲ್ಯಮಾಪನ ಮತ್ತು ಮಾನ್ಯತಾ ಮಂಡಳಿ (NAAC) ಹೇಳಿದೆ.

ರಾಧಾಕೃಷ್ಣನ್ ಸಮಿತಿಯ ಶಿಫಾರಸುಗಳ ಪ್ರಕಾರ ವಿಶ್ವವಿದ್ಯಾಲಯಗಳು ಹಾಗೂ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ‘ನ್ಯಾಕ್’ ಮಾನ್ಯತೆ ನೀಡುವ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ತರಲು, ಭ್ರಷ್ಟಾಚಾರ ನಿಯಂತ್ರಿಸಲು ಬೈನರಿ ಮಾನ್ಯತೆ ಮತ್ತು ಪ್ರಬುದ್ಧತಾ ಹಂತವನ್ನು ಬರುವ ಏಪ್ರಿಲ್‌ನಿಂದಲೇ ಜಾರಿಗೊಳಿಸಲಾಗುತ್ತಿದೆ. ನ್ಯಾಕ್ ಮಾನ್ಯತೆ ಪಡೆಯದ ಹೊಸ ಕಾಲೇಜುಗಳು ಬೈನರಿ ಮಾನ್ಯತೆ ಕೋರಿ ಅರ್ಜಿ ಸಲ್ಲಿಸಬಹುದು. ಹೊಸ ಮಾನ್ಯತಾ ಪರಿಕಲ್ಪನೆಗಳ ಜಾರಿಯ ನಂತರ ಹಿಂದಿನ ನ್ಯಾಕ್ ಶ್ರೇಣಿ ಪದ್ಧತಿಗಳು ಕ್ರಮೇಣ ರದ್ದಾಗಲಿವೆ ಎಂದು ಮಾಹಿತಿ ನೀಡಿದೆ.

ಪ್ರಕರಣದಲ್ಲಿ ಭಾಗಿಯಾದ ವಿಶ್ವವಿದ್ಯಾಲಯಗಳು 5 ವರ್ಷ ಮಾನ್ಯತೆಗಾಗಿ ಅರ್ಜಿ ಸಲ್ಲಿಸುವಂತಿಲ್ಲ. ಸಮಿತಿಯ ಸದಸ್ಯರನ್ನು ಮೌಲ್ಯಮಾಪನ ಕಾರ್ಯಗಳಿಂದಲೂ ಹೊರಗಿಡುವ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಮಂಡಳಿ ಸ್ಪಷ್ಟವಾಗಿ ಹೇಳಿದೆ.

ಆಂಧ್ರ ಪ್ರದೇಶದ ಗುಂಟೂರಿನಲ್ಲಿರುವ ಕೋನೇರು ಲಕ್ಷ್ಮಯ್ಯ ಎಜುಕೇಷನ್‌ ಫೌಂಡೇಷನ್ (ಕೆಎಲ್‌ಇಎಫ್) ನ್ಯಾಕ್‌ನಿಂದ ‘ಎ’ ಪ್ಲಸ್ ಗ್ರೇಡ್ ಪಡೆಯಲು ಲಂಚ ನೀಡಿದ ಆರೋಪ ಕೇಳಿಬಂದಿತ್ತು. ಸಮಿತಿಯ ಏಳು ಸದಸ್ಯರ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸುತ್ತಿದೆ.


Share It

You cannot copy content of this page