ಬೆಂಗಳೂರು: ನಮ್ಮಮೆಟ್ರೋ ಪ್ರಯಾಣ ದರ ಸ್ಟೇಜ್ ಆಧಾರದಲ್ಲಿ ಇಳಿಕೆ ಮಾಡಲಾಗುವುದು. ಮೆಟ್ರೋ ದರ ಶೇ. 90 ರಿಂದ ಶೇ 100 ರ ವರೆಗೆ ಹೆಚ್ಚಳವಾಗಿರುವ ನಿಲ್ದಾಣಗಳ ಮಧ್ಯೆ ಇಳಿಕೆ ಮಾಡಲಾಗುವುದು ಎಂದು ಬಿಎಂಆರ್‌ಸಿಎಲ್ ಹೇಳಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೆಟ್ರೋ ಪ್ರಯಾಣ ದರ ಪರಿಷ್ಕರಿಸುವಂತೆ ಬಿಎಂಆರ್‌ಸಿಎಲ್ ಗೆ ಸೂಚನೆ ನೀಡಿದ್ದರು. ಇದರ ಬೆನ್ನಲ್ಲೇ ಸುದ್ದಿಗೋಷ್ಠಿ ನಡೆಸಿದ ಬಿಎಂಆರ್ ಸಿಎಲ್ ಎಂಡಿ ಮಹೇಶ್ವರ್ ರಾವ್ ಅವರು, ದುಪ್ಪಟ್ಟು ದರ ಏರಿಕೆಯಾಗಿರುವ ನಿಲ್ದಾಣಗಳಲ್ಲಿನ ದರವನ್ನು ಪರಿಷ್ಕರಿಸಲಾಗುವುದು. ಇದರಿಂದ ಪ್ರಯಾಣಿಕರಿಗೆ ಸ್ವಲ್ಪ ಮಟ್ಟಿನ ರಿಲೀಫ್ ದೊರೆಯಲಿದೆ ಎಂದು ತಿಳಿಸಿದರು.
ನಮ್ಮ ಮೆಟ್ರೋ ಪ್ರಯಾಣ ದರ ಸ್ಟೇಜ್ ಆಧಾರದಲ್ಲಿ
ಇಳಿಕೆ ಮಾಡಲಾಗುವುದು. ಮೆಟ್ರೋ ದರ ಶೇ.
ರಿಂದ ಶೇ 100 ರ ವರೆಗೆ ಹೆಚ್ಚಳವಾಗಿರುವ
ನಿಲ್ದಾಣಗಳ ಮಧ್ಯೆ ಇಳಿಕೆ ಮಾಡಲಾಗುವುದು. ಶೇ
60 ದರ ಹೆಚ್ಚಳವಾಗಿರುವಲ್ಲಿ ಸ್ಲಾಬ್ ಮರ್ಜ್
ಮಾಡುತ್ತೇವೆ. ಪರಿಷ್ಕೃತ ದರ ನಾಳೆಯಿಂದಲೇ
ಜಾರಿಗೆ ಬರಲಿದೆ ಎಂದು ಅವರು ಹೇಳಿದರು.
ಮೆಟ್ರೋ ಪ್ರಯಾಣ ದರ ದುಪ್ಪಟ್ಟು ಏರಿಕೆಗೆ ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದ್ದ ಹಿನ್ನೆಲೆಯಲ್ಲಿ ಎಚ್ಚೆತ್ತ ಬಿಎಂಆರ್‌ಸಿಎಲ್ ಸ್ಟೇಜ್ ಆಧಾರದಲ್ಲಿ ಇಳಿಕೆ ಮಾಡಲು ಮುಂದಾಗಿದೆ.