ಸುದ್ದಿ

ಮೈಕ್ರೋ ಫೈನಾನ್ಸ್‌ಗಳ ಕಿರುಕುಳ; ಹೊಸ ಕಾನೂನಿನಡಿ ಕಡಿವಾಣ

Share It

ಬೆಂಗಳೂರು: ಫೈನಾನ್ಸ್‌ಗಳ ನಿಯಮ ಬಾಹಿರ ಸಾಲ ವಸೂಲಿ, ಕಿರುಕುಳಗಳ ವಿರುದ್ಧ ಜನರಿಗೆ ರಕ್ಷಣೆ ನೀಡಲು ಮುಂದಾಗಿರು ರಾಜ್ಯ ಸರ್ಕಾರ ಹೊಸ ಕಾನೂನು ರೂಪಿಸುವ ಮೂಲಕ ಮೈಕ್ರೋ ಫೈನಾನ್ಸ್‌ಗಳಿಗೆ ಅಂಕುಶ ಹಾಕಿದೆ.

ಮೈಕ್ರೋ ಫೈನಾನ್ಸ್ ಕಂಪೆನಿಗಳು ಅಥವಾ ಇತರೆ ಖಾಸಗಿ ಹಣಕಾಸು ಸಂಸ್ಥೆಗಳು, ವ್ಯಕ್ತಿಗಳು ಸಾಲ ವಸೂಲಿಯ ನೆಪದಲ್ಲಿ ನೀಡುತ್ತಿದ್ದ ಕಿರುಕುಳ, ಮಾನಸಿಕ ಹಿಂಸೆ ಮತ್ತು ದೌರ್ಜನ್ಯದಂತಹ ಅಮಾನವೀಯ, ಕಾನೂನು ಬಾಹಿರ ಕ್ರಮಗಳ ಮೇಲೆ ನಿಯಂತ್ರಣ ಹಾಗೂ ನಿರ್ಬಂಧ ಹೇರುವ ಉದ್ದೇಶದಿಂದ ನಾವು ರೂಪಿಸಿದ ಕರ್ನಾಟಕ ಕಿರು ಸಾಲ ಮತ್ತು ಸಣ್ಣ ಸಾಲ (ಬಲವಂತದ ಕ್ರಮಗಳ ಪ್ರತಿಬಂಧಕ) ಅಧ್ಯಾದೇಶ – 2025″ ಕಾನೂನಾಗಿ ಜಾರಿಗೆ ಬಂದಿದೆ.

ಮೈಕ್ರೋ ಫೈನಾನ್ಸ್‌ನಲ್ಲಿ ಸಾಲ ಪಡೆದು ಕಿರುಕುಳಕ್ಕೆ ಒಳಗಾದವರು ಪೊಲೀಸರ ಬಳಿ ದೂರು ದಾಖಲಿಸಬಹುದು, ಅಂಥವರಿಗೆ ಈ ಹೊಸ ಕಾನೂನಿನಡಿ ಹೆಚ್ಚಿನ ರಕ್ಷಣೆ ದೊರೆಯಲಿದೆ.


Share It

You cannot copy content of this page