ಸುದ್ದಿ

ವಿದ್ಯಾರ್ಥಿಗಳು ಓದಿನ ಜೊತೆಗೆ ಸಾಮಾಜಿಕ ಕಾಳಜಿ ಬೆಳೆಸಿಕೊಳ್ಳಿ: ಮಲಯಶಾಂತಮುನಿ ದೇಶಿಕೇಂದ್ರ ಶಿವಾಚಾರ್ಯ ಶ್ರೀ ಆಶೀರ್ವಚನ

Share It

ಬೆಂಗಳೂರಿನ ಶ್ರೀ ಅರಬಿಂದೋ ಕಾಲೇಜಿನ ವತಿಯಿಂದ ಶಿವಗಂಗೆ ಕ್ಷೇತ್ರದಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ 7 ದಿನಗಳ ವಿಶೇಷ ವಾರ್ಷಿಕ ಶಿಬಿರ
7 ದಿನಗಳ ವಿಶೇಷ ವಾರ್ಷಿಕ ಶಿಬಿರ

ನೆಲಮಂಗಲ: ವಿದ್ಯಾರ್ಥಿಗಳು ಕಲಿಕೆಯ ಜೊತೆಗೆ ಸಾಮಾಜಿಕ ಕಾಳಜಿ ಬೆಳೆಸಿಕೊಳ್ಳುವ ಮೂಲಕ ಸಮಾಜ ಕಟ್ಟುವ ಕಾಯಕದಲ್ಲಿ ನಿರತರಾಗಬೇಕು ಎಂದು ಶಿವಗಂಗೆ ಕ್ಷೇತ್ರದ ಕಂಬಾಳು ಗ್ರಾಮದ ಶ್ರೀ ಮೇಲಣಗವಿ ಮಠದ ಶ್ರೀ ಮಲಯಶಾಂತಮುನಿ ದೇಶಿಕೇಂದ್ರ ಶಿವಾಚಾರ್ಯ ಶ್ರೀಗಳು ಶಿಬಿರಾರ್ಥಿಗಳಿಗೆ ಆಶೀರ್ವಚನ ನೀಡಿದರು.

ಭಾರತ ಸರ್ಕಾರ ಹಾಗೂ ಕರ್ನಾಟಕ ಸರ್ಕಾರದ ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಹಾಗೂ ಬೆಂಗಳೂರು ವಿಶ್ವವಿದ್ಯಾಲಯದ ಸಹಯೋಗದೊಂದಿಗೆ ಬೆಂಗಳೂರಿನ ರಾಜಾಜಿನಗರದ ಪ್ರತಿಷ್ಠಿತ ಶ್ರೀ ಅರಬಿಂದೋ ಪದವಿ ಕಾಲೇಜಿನ ಎನ್.ಎಸ್.ಎಸ್ ಘಟಕದ ವತಿಯಿಂದ ದಿನಾಂಕ 06/02/2025 ರಿಂದ 12/02/2025 ರ ವರೆಗೆ ಎನ್.ಎಸ್.ಎಸ್ ವಾರ್ಷಿಕ ಸೇವಾ ಶಿಬಿರವನ್ನು ನೆಲಮಂಗಲ ತಾಲ್ಲೂಕಿನ ಶಿವಗಂಗೆ ಕ್ಷೇತ್ರದ ಕಂಬಾಳು ಗ್ರಾಮದ ಶ್ರೀ ಮೇಲಣಗವಿ ಮಠದಲ್ಲಿ ಆಯೋಜಿಸಲಾಗಿತ್ತು.

ಶಿಬಿರದ ಮೊದಲ ದಿನ ದಿನಾಂಕ 6/2/2025 ರಂದು ಶ್ರೀ ಮಠದ ಪೂಜ್ಯ ಗುರುಗಳಾದ ಶ್ರೀ ಮಲಯಶಾಂತಮುನಿ ದೇಶಿಕೇಂದ್ರ ಶಿವಾಚಾರ್ಯ ಮಹಾಸ್ವಾಮಿಗಳು ಶಿಬಿರವನ್ನು ಉದ್ಘಾಟಿಸಿದರು. ಹಾಗೂ ರಾಜಾಜಿನಗರ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಟಿ.ಎನ್ ರವಿಪ್ರಕಾಶ್ ರವರು ಹಾಗೂ ಕಾರ್ಯದರ್ಶಿಗಳಾದ ಶ್ರೀ ರಮೇಶ್ ಚಂದ್ರ ಹೊಂಗಲ್ ರವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಕಾಲೇಜಿನ ಪ್ರಾಂಶುಪಾಲರಾದ ಡಾ.ಶೈಲಜಾ ರವರು ಹಾಗೂ ಎನ್.ಎಸ್.ಎಸ್ ಕಾರ್ಯಕ್ರಮಾಧಿಕಾರಿ ಶ್ರೀ ದುರ್ಗಾ ಪ್ರಸಾದ್ ರವರು ಉಪಸ್ಥಿತರಿದ್ದರು.


Share It

You cannot copy content of this page