ಸುದ್ದಿ

ಅತ್ಯಾಚಾರ ಪ್ರಕರಣ; ಅಪರಾಧಿಗೆ 20 ವರ್ಷ ಕಠಿಣ ಶಿಕ್ಷೆ ವಿಧಿಸಿದ ಕೋಟ್೯

Share It

ಕೆಜಿಎಫ್‌: ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ್ದ ಆರೋಪ ಸಾಬೀತಾಗಿದ್ದು ಅಪರಾಧಿಗೆ 20 ವರ್ಷ ಕಠಿಣ ಶಿಕ್ಷೆ ವಿಧಿಸಿ ಅಪರ ಜಿಲ್ಲಾ ಮತ್ತು ಸತ್ರ, ನ್ಯಾಯಾಲಯ, ಎಫ್‌ಟಿಎಸ್‌ಸಿ-1 (ಪೋಕ್ಸೋ) ನ್ಯಾಯಾಲಯದ ಮಹತ್ವದ ಆದೇಶ ನೀಡಿದೆ.

ಕ್ಯಾಸಂಬಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪರಾಧಿ ಗಂಗಾಧರ್(28) ಎಂಬಾತ ಅತ್ಯಾಚಾರ ಎಸಗಿದ್ದ. ಇಲ್ಲಿಯ ನ್ಯಾಯಾಲಯ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹45,000 ದಂಡ ವಿಧಿಸಿದೆ.

ಆರೋಪಿಯ ವಿರುದ್ಧ ಸಿಪಿಐ ಸುರೇಶ್ ರಾಜು ನ್ಯಾಯಾಲಯದಲ್ಲಿ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಎಫ್‌ಟಿಎಸ್‌ಸಿ-1 (ಪೋಕ್ಸ್‌) ನ್ಯಾಯಾಲಯದ ನ್ಯಾಯಾಧೀಶರಾದ ಕೆ.ಬಿ.ಪ್ರಸಾದ್ ಅವರು ಅಪರಾಧಿಗೆ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹45,000 ದಂಡ ವಿಧಿಸಿದ್ದು.  ನೊಂದ ಬಾಲಕಿಗೆ ₹4 ಲಕ್ಷ ಪರಿಹಾರವನ್ನು ನೀಡಲು ಆದೇಶಿಸಿ, ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ಅಭಿಯೋಜಕಿ ಡಿ.ಲಲಿತಕುಮಾರಿ ವಾದ ಮಂಡಿಸಿದರು.


Share It

You cannot copy content of this page