ಬೆಂಗಳೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲ ಯವು ಪ್ರಸಕ್ತ 2024-25ನೇ ಶೈಕ್ಷಣಿಕ ಸಾಲಿನ ಪ್ರವೇಶ ಪ್ರಕ್ರಿಯೆ ಆರಂಭಿಸಿದ್ದು, ವಿವಿಧ ಪದವಿ, ಸ್ನಾತಕೋತ್ತರ ಪದವಿ ಕೋರ್ಸುಗಳಿಗೆ ಅರ್ಹ ಅಭ್ಯರ್ಥಿ ಗಳಿಂದ ಅರ್ಜಿ ಆಹ್ವಾನಿಸಿದೆ. ಪದವಿಯಲ್ಲಿ ಬಿ.ಎ, ಬಿಕಾಂ, ಬಿಎಸ್ಸಿ, ಬಿಎಸ್‌ಡಬ್ಲ್ಯು, ಬಿಬಿಎ, ಬಿಸಿಎ, ಬಿಎಲ್ ಐಎಸ್ಸಿ, ಸ್ನಾತಕೋತ್ತರ ಕೋರ್ಸುಗಳಾದ ಎಂಎ, ಎಂಎಸ್ಸಿ, ಎಂಕಾಂ, ಎಂಸಿಜೆ, ಎಂಎಸ್‌ಡಬ್ಲ್ಯು, ಎಂಎಲ್‌ಐಐಸ್ಸಿ, ಎಂಸಿಎ, ಎಂಬಿಎ, ಹಾಗೂ ವಿವಿಧ ಪಿಜಿ ಸರ್ಟಿಫಿಕೇಟ್, ಡಿಪ್ಲೊಮಾ ಕೋರ್ಸುಗಳಿಗೆ ಅರ್ಜಿ ಸಲ್ಲಿಸಬಹುದು. ಕರಾ ಮುವಿಯ ವೆಬ್‌ಸೈಟ್
ಅರ್ಹ ಅಭ್ಯರ್ಥಿಗಳು www.ksoumysuru.ac.in ನಲ್ಲಿ ಅರ್ಜಿ ಭರ್ತಿ ಮಾಡಿ, ಆನ್‌ಲೈನ್‌ನಲ್ಲಿ ಶುಲ್ಕ ಪಾವತಿಸಿದ ನಂತರ ಮಲ್ಲೇಶ್ವರಂನ 13ನೇ ಅಡ್ಡರಸ್ತೆಯಲ್ಲಿರುವ ಸರ್ಕಾರಿ ಪಿಯು ಬಾಲಕಿಯರ ಕಾಲೇಜಿನಲ್ಲಿರುವ ಕರ್ನಾಟಕ ರಾಜ್ಯ ಮುಕ್ತ ವಿವಿ ಪ್ರಾದೇಶಿಕ ಕೇಂದ್ರದಲ್ಲಿ ಪ್ರವೇಶ ಪಡೆಯಬಹುದು ಎಂದು ವಿವಿ ಪ್ರಾದೇಶಿಕ ಕೇಂದ್ರದ ನಿರ್ದೇಶಕರು ತಿಳಿಸಿದ್ದಾರೆ.