ಎಚ್.ಡಿ.ಕೋಟೆ(ಮೈಸೂರು): ಸರ್ಕಾರಿ ಹಿರಿಯ ಪ್ರಾಥಾಮಿಕ ಶಾಲೆಯ ಮುಖ್ಯ ಶಿಕ್ಷಕ ಮೂವರು ಅಪ್ರಾಪ್ತ ವಿದ್ಯಾರ್ಥಿನಿಯರಿಗೆ ನಿದ್ರೆ ಮಾತ್ರೆ ನೀಡಿ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಎಚ್.ಡಿ.ಕೋಟೆ ತಾಲೂಕಿನ ಅಗಸರಹುಂಡಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ನಡೆದಿದೆ.
ಅಗಸರಹುಂಡಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಆರೋಪಿ ಗಿರೀಶ್ ಈ ಕೃತ್ಯ ಎಗಿದ್ದು ಆರೋಪಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಿದ್ದು ಸೇವೆಯಿಂದ ಅಮಾನತು ಮಾಡಲಾಗಿದೆ.
ಫೆ.25ರಂದು ಆರೋಪಿ ಗಿರೀಶ್ ಮೂವರು ಅಪ್ರಾಪ್ತ ವಿದ್ಯಾರ್ಥಿನಿಯರಿಗೆ ಜಂತು ಹುಳುವಿನ ಮಾತ್ರೆ ಎಂದು ಹೇಳಿ ನಿದ್ರೆ ಮಾತ್ರೆ ಕುಡಿಸಿ ಲೈಂಗಿಕ ದೌರ್ಜನ್ಯವೆಸಗಿ ನಾಪತ್ತೆಯಾಗಿದ್ದಾನೆ. ಆರೋಪಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದ್ದು ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.