ಬೆಂಗಳೂರು(ವಿಧಾನಸಭೆ): ಮೈಕ್ರೋ ಫೈನಾನ್ಸರ್ ಹಾವಳಿ ತಡೆಗೆ ರಾಜ್ಯ ಸರ್ಕಾರ ಜಾರಿಗೆ ತಂದಿದ್ದ ಸುಗ್ರೀವಾಜ್ಞೆಗೆ ಕಾನೂನು ರೂಪ ನೀಡಲಾಗುತ್ತಿದ್ದು, ಅದಕ್ಕೆ ಪೂರಕವಾಗಿ ಮೂರು ವಿಧೇಯಕಗಳನ್ನು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಮಂಗಳವಾರ ಮಂಡಿಸಿದರು.
ಸಾಲಗಾರರ ವಿರುದ್ಧ ಲೇವಾದೇವಿದಾರ ಅಥವಾ ಲೇವಾದೇವಿ ಸಂಸ್ಥೆ ಬಲವಂತದ ಕ್ರಮ ಕೈಗೊಳ್ಳುವುದನ್ನು ತಡೆಯುವ ಕರ್ನಾಟಕ ಲೇವಾದೇವಿದಾರರ (ತಿದ್ದುಪಡಿ) ವಿಧೇಯಕ 2025, ಜತೆಗೆ ದುಬಾರಿ ಬಡ್ಡಿ ವಿಧಿಸುವುದನ್ನು ತಡೆಯುವುದು ಹಾಗೂ ಗಿರವಿದಾರರಿಂದ ರಕ್ಷಿಸುವ ಕರ್ನಾಟಕ ಗಿರವಿದಾರರ (ತಿದ್ದುಪಡಿ) ವಿಧೇಯಕ 2025, ಕರ್ನಾಟಕ ಮಿತಿ ಮೀರಿದ ಬಡ್ಡಿ ವಿಧಿಸುವಿಕೆಯ ನಿಷೇಧ (ತಿದ್ದುಪಡಿ) ವಿಧೇಯಕ 2025 ಅನ್ನು ಮಂಡಿಸಲಾಯಿತು.
ಇನ್ನೂ ಸಾಲ ವಸೂಲಾತಿ ವಿಚಾರದಲ್ಲಿ ಕಿರುಕುಳ ನೀಡುವವರಿಗೆ ಗರಿಷ್ಠ 10 ವರ್ಷಗಳ ಗರಿಷ್ಠ ಜೈಲು ಶಿಕ್ಷೆ ಹಾಗೂ 5 ಲಕ್ಷ ರು.ವರೆಗೆ ದಂಡ ವಿಧಿಸುವ ಕುರಿತ ತಿದ್ದುಪಡಿಯನ್ನು ಈ ಮೂರು ವಿಧೇಯಕಗಳಲ್ಲೂ ಮಾಡಲಾಗಿದೆ ಎಂದು ಸಚಿವ ಪ್ರಿಯಾಂಕ ಖರ್ಗೆ ತಿಳಿಸಿದರು.