ನವದೆಹಲಿ: ಖಾಸಗಿ ಆಸ್ಪತ್ರೆಗಳ ಚಿಕಿತ್ಸೆ ದುಬಾರಿಯಾಗುತ್ತಿರುವ ಈ ಸಂದರ್ಭದಲ್ಲಿ ರೋಗಿಗಳು ತಮ್ಮ ಚಿಕಿತ್ಸೆಗೆ ಬೇಕಾಗುವ ಔಷಧಿ, ವೈದ್ಯಕೀಯ ಸಾಧನಗಳನ್ನು ತಮ್ಮ ಆಸ್ಪತ್ರೆಯ ಮೆಡಿಕಲ್ ಶಾಪ್ ನಲ್ಲಿಯೇ ಖರೀದಿ ಮಾಡಬೇಕು ಎಂದು ಒತ್ತಾಯಿಸುವುದು ತಪ್ಪು ಎಂದು ಹೇಳಿರುವ ಸುಪ್ರೀಂ ಇದನ್ನು ತಡೆಯುವ ನಿಟ್ಟಿನಲ್ಲಿ ನಿಯಮ ರೂಪಿಸುವಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.
ತಮ್ಮ ವೈಯಕ್ತಿಕ ಅನುಭವದ ಆಧಾರದಲ್ಲಿ ಸಿದ್ಧಾರ್ಥ ದಾಲ್ಮಿಯಾ ಎಂಬುವರು ಖಾಸಗಿ ಆಸ್ಪತ್ರೆಗಳು ತಮ್ಮ ಔಷಧಾಲಯಗಳಿಂದಲೇ ಎಲ್ಲ ಔಷಧಿಗಳನ್ನು ಖರೀದಿಸುವಂತೆ ಒತ್ತಾಯಿಸುತ್ತವೆ ಅಲ್ಲಿ ಎಂಆರ್ ಪಿ ಗಿಂತ ಅಧಿಕ ಬೆಲೆ ನಿಗಧಿಪಡಿಸಲಾಗಿರುತ್ತದೆ ಎಂದು ಆರೋಪಿಸಿ ರಿಟ್ ಅರ್ಜಿ ಸಲ್ಲಿಸಿದ್ದರು.
ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರ್ಯಕಾಂತ್ ಅವರ ಪೀಠ, ಇದರ ವಿರುದ್ಧ ನಿಯಮ ರೂಪಿಸುವಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಸೂಚಿಸಿದೆ.